ನವದೆಹಲಿ: ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ. ನನ್ನ ಹೆಸರು ರಾಹುಲ್ ಗಾಂಧಿ ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ” ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಪೌರತ್ವ ತಿದ್ದು ಪಡಿ ಮಸೂದೆ ವಿರುದ್ದ ದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಬಚಾವೋ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಸ್ತುತ ವಿಚಾರ ಇರುವುದು ನನ್ನ ಹೇಳಿಕೆಯ ಕುರಿತು ಅಲ್ಲ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಈಶಾನ್ಯ ರಾಜ್ಯಗಳಿಗೆ ಪೌರತ್ವ ಮಸೂದೆ ಮುಖಾಂತರ ಬೆಂಕಿ ಹಚ್ಚಿದ್ದಾರೆ. ಜನರ ಗಮನವನ್ನು ಆ ವಿಷಯದಿಂದ ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ನನ್ನ ಹೇಳಿಕೆಯ ಕುರಿತು ಚರ್ಚೆ ಮಾಡುತ್ತಿದ್ದಾರೆ” ಎಂದು ದೂರಿದರು.
“ಬಿಜೆಪಿ ನಾಯಕರು ನನ್ನ ಹೇಳಿಕೆಗೆ ಕ್ಷಮೆ ಕೇಳುವಂತೆ ಹೇಳುತ್ತಿದ್ದಾರೆ. ಆದರೆ ನಾನು ಸತ್ಯವನ್ನು ಹೇಳಿದ್ದೇನೆ. ನಾನು ಕ್ಷಮೆ ಕೇಳಲು ರಾಹುಲ್ ಸಾವರ್ಕರ್ ಅಲ್ಲ. ನನ್ನ ಹೆಸರು ರಾಹುಲ್ ಗಾಂಧಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರ ರಾಜಧಾನಿ ದೆಹಲಿಯನ್ನು ರೇಪ್ ಕ್ಯಾಪಿಟಲ್ ಎಂದು ಈ ಮೊದಲು ಹೇಳಿದ್ದಾರೆ. ಅದು ಈಗಲೂ ನನ್ನ ಮೊಬೈಲ್‌ನಲ್ಲಿ ಇದೆ. ಅದನ್ನು ನಾನು ಟ್ವೀಟ್ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
“ನಾನು, ಭಾರತದ ವಿವಿಧ ಬಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಸುದ್ದಿಯಾಗುತ್ತಿದೆ. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿದೆ. ನಾವು ಮೇಕ್ ಇನ್ ಇಂಡಿಯಾ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮಾತಾನಾಡಿದ್ದನ್ನು ನೋಡುತ್ತೇನೆ ಅಂದುಕೊಂಡಿದ್ದೆ ಆದರೆ ದಿನ ಪತ್ರಿಕೆಗಳಲ್ಲಿ ರೇಪ್ ಇನ್ ಇಂಡಿಯಾ ಸುದ್ದಿಗಳೇ ಇವೆ ಎಂದು ಹೇಳಿದ್ದೆ” ಎಂದು ತನ್ನ ಹೇಳಿಕೆಯ ಸಮರ್ಥನೆ ಮಾಡಿಕೊಂಡರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…