ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಆಯ್ಕೆಯಾದ ಎಲ್ಲಾ ಗಂಡಸು ಎಂಪಿಗಳಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ ಹಾಕಿದ್ದಾರೆ.
ಗೋ ಬ್ಯಾಕ್ ಶೋಭಾ ಅಭಿಯಾನ ವಿಚಾರಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಕ್ಷೇತ್ರದ ಈ ಹಿಂದಿನ ಗಂಡಸು ಸಂಸದರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ ಇಲ್ಲದೇ ಇರಬಹುದು. ಆದರೆ ಎಲ್ಲರಿಗಿಂತ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಗೆ ಪಾಸ್ ಪೋರ್ಟ್ ಕಚೇರಿ ಬಂದಿದೆ, ರಾಜ್ಯದ ಏಕೈಕ ಸಖಿ ಸೆಂಟರ್ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿದೆ, ಎರಡು ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ತಂದಿದ್ದೇವೆ, ಇದಲ್ಲದೆ ಜಿಟಿಡಿಸಿ ಕಟ್ಟಡ, ಕೌಶಲ್ಯ ತರಬೇತಿ ಕೇಂದ್ರ ನಿರ್ಮಾಣವಾಗಿದೆ. ಜತೆಗೆ 550 ಕೋಟಿ ರುಪಾಯಿ ಸಿಆರ್ ಎಫ್ ಫಂಡ್ ತಂದಿದ್ದೇನೆ. ಎರಡು ಜಿಲ್ಲೆಗಳಲ್ಲಿಯೂ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ’ಗಂಡಸು ’ ಸಂಸದರಾಗಿದ್ದವರಿಗೆ ನಾನು ಚಾಲೆಂಜ್ ಮಾಡುತ್ತೇನೆ. ನನಗೆ ಹಣಬಲ, ಜಾತಿ ಬಲ, ಬಾಹುಬಲ ಇಲ್ಲದೆ ಇರಬಹುದು, ಅಥವಾ ಬೆಂಬಲ ಕೊಡದವರಿಲ್ಲದಿರಬಹುದು. ಆದರೆ ಇಷ್ಟು ವರ್ಷ ಕ್ಷೇತ್ರದಲ್ಲಿ ಗಂಡಸು ಸಂಸದರೆಣಿಸಿಕೊಂಡವರು ಏನು ಮಾಡಿದ್ದೀರಿ ? ಮಹಿಳೆಯಾಗಿ ನಾನು ಇಷ್ಟೆಲ್ಲಾ ಮಾಡಿದ್ದೇನೆ . ನಿಮ್ಮ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ನಾನು ಇದೆಲ್ಲವೂ ಟಿಕೆಟ್ ನ ಆಸೆಗಾಗಿ ಮಾಡಿದ್ದಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಮಾಡಿರುವಂತದ್ದು ಎಂದು ಅಕ್ರೋಶ ವ್ಯಕ್ತಪಡಿಸಿದರು.
ನನ್ನ ವಿರುದ್ದ ಧನಿ ಎತ್ತಿದವರ ಕೊಡುಗೆಯೇನು? ನಾನು 25 ವರ್ಷದಿಂದ ಪಕ್ಷಕ್ಕೆ ಮಣ್ಣು ಹೊತ್ತಿದ್ದೇನೆ. ರಾಜ್ಯದಲ್ಲೆಲ್ಲಾ ಓಡಾಡಿದ್ದೇನೆ. ನೀವು ಬಿಜೆಪಿಗೆ ಏನು ಮಾಡಿದ್ದೀರಿ? ನನ್ನ ಜೊತೆ ಚರ್ಚೆಗೆ ಬನ್ನಿ ಆಮೇಲೆ ಟಿಕೆಟ್ ಕೇಳಿ ಎಂದು ಪರೋಕ್ಷವಾಗಿ ಜಯಪ್ರಕಾಶ್ ಹೆಗ್ಡೆ ವಿರುದ್ದ ಕಿಡಿಕಾರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…