ಉಡುಪಿ

ಕ್ಷೇತ್ರದ ಅಭಿವೃದ್ಧಿ ಶಾಸಕರ ಸಾಧನೆಯಲ್ಲ, ಕರ್ತವ್ಯ: ಲಾಲಾಜಿ ಆರ್‌. ಮೆಂಡನ್‌

ಕಾಪು ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದಾಗ ಕೇಂದ್ರದ ಹಿರಿಯ ಸಚಿವರನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೊಳಿಸಿ ಮೂಡುಬೆಳ್ಳೆ ಹಾಗೂ ಶಿರ್ವದ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಅದನ್ನು ಈಗ ಕಾಂಗ್ರೆಸ್‌ ಪಕ್ಷದವರು ತಮ್ಮ ಸರಕಾರದ ಸಾಧನೆಯೆಂಬಂತೆ ಬಿಂಬಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುವುದು ಶಾಸಕರ ಸಾಧನೆಯಲ್ಲ, ಕರ್ತವ್ಯವಾಗಿದೆ. ಮತದಾರರು ಬಿಜೆಪಿಯನ್ನು ಬೆಂಬಲಿಸಿ ಜನಸೇವೆ ಮಾಡುವ ಅವಕಾಶ ನೀಡಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಶಿರ್ವ ಬಸ್‌ ನಿಲ್ದಾಣದ ಬಳಿ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಬಿಜೆಪಿ ಚುನಾವಣಾ ಪ್ರಚಾರ ರಥ ಯಾತ್ರೆಯ ಪ್ರಥಮ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ ಮಾತನಾಡಿ ಕೇಂದ್ರದ ಮೋದಿ ಸರಕಾರದ ಜನಪರ ಯೋಜನೆಗಳನ್ನು ತನ್ನ ಸಾಧನೆಯೆಂಬಂತೆ ಬಿಂಬಿಸುವ ರಾಜ್ಯ ಸರಕಾರ ಹಿಂದೂ ಯುವಕರ ರಕ್ಷಣೆ ಮಾಡಲು ವಿಫಲವಾಗಿದೆ. ಕಾಂಗ್ರೆಸ್‌ ಸರಕಾರದ ದುರಾಡಳಿತದ ಬದಲಾವಣೆಗಾಗಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸಿ ಸಜ್ಜನ ರಾಜಕಾರಣಿ ಲಾಲಾಜಿ ಮೆಂಡನ್‌ ಅವರನ್ನು ಗೆಲ್ಲಿಸಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ವಾರಿಜಾ ಪೂಜಾರ್ತಿ ಮಾತನಾಡಿದರು. ರಥಯಾತ್ರೆಯ ಉಸ್ತುವಾರಿ ನಾಗರಾಜ ಶೆಟ್ಟಿ, ಪ್ರಸಾದ್‌ ಶೆಟ್ಟಿ ಕುತ್ಯಾರು,ದೇವದಾಸ್‌ ನಾಯಕ್‌, ಶಿರ್ವಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್‌ ನಾಯ್ಕ,ಸಂತೋಷ್‌ ಕುಮಾರ್‌ ಮೂಡುಬೆಳ್ಳೆ, ರಾಜೇಶ್‌ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.ರವೀಂದ್ರ ಪಾಟ್ಕರ್‌ ನಿರೂಪಿಸಿ ,ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್‌ ಶೆಟ್ಟಿ ಕೋಡು ವಂದಿಸಿದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago