ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕು : ಲಾಲಾಜಿ – Viswanews24

Featured, ಉಡುಪಿ

ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕು : ಲಾಲಾಜಿ 

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಶಕ್ತಿಕೇಂದ್ರ ಸಭೆಯು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಕ್ಷದ
ಕಚೇರಿಯಲ್ಲಿ ಜರುಗಿತು.

ಅಧ್ಯಕ್ಷರು ಮಾತನಾಡಿ ಕೇಂದ್ರ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲು ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕಾಗಿ ತಿಳಿಸಿದರು.
ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್‌ರವರು ಮಾತನಾಡಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕ್ಷೇತ್ರ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಬಡಗುಬೆಟ್ಟು, ಕ್ಷೇತ್ರ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚೇತನಾ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷರುಗಳಾದ ಸುಧಾಕರ್ ಶೆಟ್ಟಿ ಮತ್ತು ಸುರೇಶ್ ಸೇರ್ವೇಗಾರ್ ಪಂಚಾಯತ್ ಉಪಾಧ್ಯಕ್ಷರಾದ ದೇವು ಪೂಜಾರಿ, ವಕ್ತಾರರಾದ ನವೀನ್ ಎಸ್ ಕೆ ಮತ್ತು ಪಕ್ಷದ ಪ್ರಮುಖರಾದ ತುಕರಾಮ್, ಹರೀಶ್, ಮತ್ತು ಇತರರು ಭಾಗವಹಿಸಿದ್ದರು.

Leave a Reply