Featured

ಕ್ಷೇತ್ರದ ಜನರ ಬಯಕೆಯಂತೆ ಕಾಪು ಕ್ಷೇತ್ರದ ಅಭಿವೃದ್ಧಿ : ಜೆಡಿಎಸ್ ಜಿಲ್ಲಾಧ್ಯಕ್ಷ ಯೊಗೀಶ್ ಶೆಟ್ಟಿ

ಕಾಪು :  ಜೆಡಿಎಸ್ ಪಕ್ಷವು ಕಾಪು ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿ ಮತ್ತು ಸರ್ವಧರ್ಮಿರು ಸೌಹಾರ್ಧಯುತವಾಗಿ ಸಹಬಾಳ್ವೆಯಿಂದ ಜೀವನ ನಡೆಸುವಂತಹ ವಾತಾವರಣವನ್ನು ನಿರ್ಮಿಸಲಿದೆ.ಕೋಮು ಗಲಭೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಕುಮಾರಣ್ಣನವರು ಪ್ರತ್ಯೇಕ ಕಾನೂನನ್ನು ರೂಪಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಹೇಳಿದ್ದಾರೆ.

ಕಾಪು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಬಯಕೆಯಂತೆ ನಾವು ಕೂಡ ಕಾಪು ಕ್ಷೇತ್ರದ ಬದಲಾವಣೆಯನ್ನು ಬಯಸಿದ್ದೇವೆ.ಅದಕ್ಕಾಗಿ ಶ್ರಮಿಸಲಿದ್ದೇವೆ.ಈಗಾಗಲೇ ಬಿರುಸಿನ ಪ್ರಚಾರಗಳು ನಡೆಯುತ್ತವೆ. ಕಡಿಮೆ ಸಂಖ್ಯೆಯಲ್ಲಾದರು ನಮ್ಮ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದಾರೆ.ಅವರನ್ನು ಪ್ರಚಾರಕ್ಕೆ ಕಳುಹಿಸುತ್ತಿದ್ದೇವೆ.ನಮಗೆ ಬಾಡಿಗೆ ಕಾರ್ಯಕರ್ತರ ಆವಶ್ಯಕತೆ ಇಲ್ಲ ಎಂದರು.

ಮತದಾರರಿಂದಲೇ ಮತಪ್ರಚಾರ: ಮನ್ಸೂರ್ ಇಬ್ರಾಹಿಂ

ನಾವು ಪ್ರಚಾರಕ್ಕಾಗಿ ಮನೆಮನೆಗೆ ಭೇಟಿ ನೀಡಿದಾಗ ಮತದಾರರು ಉತ್ತಮ ಸ್ಪಂದನೆ ನೀಡಿದ್ದಾರೆ. ಅಲ್ಲದೆ ಅಕ್ಕಪಕ್ಕದವರಲ್ಲಿ ಕುಮಾರಣ್ಣನವರ ಸರಕಾರ ಹಾಗು ಯೋಚನೆ ಮತ್ತು ಯೋಜನೆಗಳ ಕುರಿತು ಮನವರಿಕೆ ಮಾಡಿಕೊಡುವುದರೊಂದಿಗೆ ಜೆಡಿಎಸ್ ಪರ ಮತಯಾಚಿಸುವ ಕೆಲಸ ಕ್ಷೇತ್ರದ ಮತದಾರರಿಂದಲೇ ನಡೆಯುತ್ತಿವೆ.ಜನ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಅವಕಾಶ ನೀಡಿ ಮೋಸ ಹೋಗಿದ್ದಾರೆ ಹಾಗಾಗಿ ಮತದಾರರು ಬದಲಾವಣೆ ಬಯಸುತ್ತಿದ್ದಾರೆ.ಈಗಾಗಲೇ ಹಲವಾರು ಸಮಸ್ಯೆಗಳಲ್ಲಿ ಜನರು ಸಿಲುಕಿಕೊಂಡಿದ್ದಾರೆ.

ಮೀನುಗಾರಿಕೆ ಮತ್ತು ಮರಳುಗಾರಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಮಂಗಳೂರಿಂದ ಕಾರವಾರದ ವರೆಗಿನ ಜನ ಸೋತು ಹೋಗಿದ್ದಾರೆ.ಅದರಲ್ಲೂ ಲಾಬಿ ನಡೆಯುತ್ತಿವೆ.ಇದಕ್ಕೆ ರಾಜ್ಯ ಸರಕಾರ ಮೂಲ ಕಾರಣ .ಮರಳುಗಾರಿಕೆ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಗಳು ಮತ್ತು ಎಸಿಯವರಿಗೆ ಹಲ್ಲೆ ನಡೆದಿರುವುದು ತುಂಬಾ ಖೇದಕರ.ಅದನ್ನು ಸರಿಪಡಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ, ಕಾಪು ಕ್ಷೇತ್ರದಲ್ಲಿ ಈಗಾಗಲೇ ತಲೆಎತ್ತಿ ನಿಂತಿರುವ ಕಾರ್ಖಾನೆಗಳಲ್ಲಿ ಹೊರ ರಾಜ್ಯದ ಕಾರ್ಮಿಕರ ಸಂಖ್ಯೆ ಜಾಸ್ತಿಯಾಗಿದ್ದು, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗ ಪಡೆಯುವಲ್ಲಿ ವಂಚಿತರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ.ಅದೆಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ.ಈ ಬಗ್ಗೆ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಲ್ಲಿನ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ. ಈ ಸಮಸ್ಯೆಗಳಿಗೆ ಮುಂಬರುವ ಕುಮಾರಣ್ಣನವರ ಸರಕಾರ ಪರಿಹಾರ ಕಂಡುಕೊಳ್ಳಲಿದೆ ಎಂದು ಮನ್ಸೂರ್ ಇಬ್ರಾಹಿಂ ಭರವಸೆಯನ್ನು ನೀಡಿದರು.

ಜಿಲ್ಲಾ ಜೆಡಿಎಸ್ ಕಾರ್ಯಧ್ಯಕ್ಷ ವಾಸುದೇವ ರಾವ್ , ರಾಜ್ಯ ಕಾರ್ಯದರ್ಶಿ ಶೇಖರ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಕಾಪು ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಯೂಸುಫ್, ಹುಸೇನ್ ಹೈಕಾಡಿ  ಹಾಗು ಇನ್ನಿತರ ಜೆಡಿಎಸ್ ಮುಖಂಡರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago