ಕಾಪು : ಜೆಡಿಎಸ್ ಪಕ್ಷವು ಕಾಪು ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿ ಮತ್ತು ಸರ್ವಧರ್ಮಿರು ಸೌಹಾರ್ಧಯುತವಾಗಿ ಸಹಬಾಳ್ವೆಯಿಂದ ಜೀವನ ನಡೆಸುವಂತಹ ವಾತಾವರಣವನ್ನು ನಿರ್ಮಿಸಲಿದೆ.ಕೋಮು ಗಲಭೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಕುಮಾರಣ್ಣನವರು ಪ್ರತ್ಯೇಕ ಕಾನೂನನ್ನು ರೂಪಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಹೇಳಿದ್ದಾರೆ.
ಕಾಪು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಬಯಕೆಯಂತೆ ನಾವು ಕೂಡ ಕಾಪು ಕ್ಷೇತ್ರದ ಬದಲಾವಣೆಯನ್ನು ಬಯಸಿದ್ದೇವೆ.ಅದಕ್ಕಾಗಿ ಶ್ರಮಿಸಲಿದ್ದೇವೆ.ಈಗಾಗಲೇ ಬಿರುಸಿನ ಪ್ರಚಾರಗಳು ನಡೆಯುತ್ತವೆ. ಕಡಿಮೆ ಸಂಖ್ಯೆಯಲ್ಲಾದರು ನಮ್ಮ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದಾರೆ.ಅವರನ್ನು ಪ್ರಚಾರಕ್ಕೆ ಕಳುಹಿಸುತ್ತಿದ್ದೇವೆ.ನಮಗೆ ಬಾಡಿಗೆ ಕಾರ್ಯಕರ್ತರ ಆವಶ್ಯಕತೆ ಇಲ್ಲ ಎಂದರು.
ಮತದಾರರಿಂದಲೇ ಮತಪ್ರಚಾರ: ಮನ್ಸೂರ್ ಇಬ್ರಾಹಿಂ
ನಾವು ಪ್ರಚಾರಕ್ಕಾಗಿ ಮನೆಮನೆಗೆ ಭೇಟಿ ನೀಡಿದಾಗ ಮತದಾರರು ಉತ್ತಮ ಸ್ಪಂದನೆ ನೀಡಿದ್ದಾರೆ. ಅಲ್ಲದೆ ಅಕ್ಕಪಕ್ಕದವರಲ್ಲಿ ಕುಮಾರಣ್ಣನವರ ಸರಕಾರ ಹಾಗು ಯೋಚನೆ ಮತ್ತು ಯೋಜನೆಗಳ ಕುರಿತು ಮನವರಿಕೆ ಮಾಡಿಕೊಡುವುದರೊಂದಿಗೆ ಜೆಡಿಎಸ್ ಪರ ಮತಯಾಚಿಸುವ ಕೆಲಸ ಕ್ಷೇತ್ರದ ಮತದಾರರಿಂದಲೇ ನಡೆಯುತ್ತಿವೆ.ಜನ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಅವಕಾಶ ನೀಡಿ ಮೋಸ ಹೋಗಿದ್ದಾರೆ ಹಾಗಾಗಿ ಮತದಾರರು ಬದಲಾವಣೆ ಬಯಸುತ್ತಿದ್ದಾರೆ.ಈಗಾಗಲೇ ಹಲವಾರು ಸಮಸ್ಯೆಗಳಲ್ಲಿ ಜನರು ಸಿಲುಕಿಕೊಂಡಿದ್ದಾರೆ.
ಮೀನುಗಾರಿಕೆ ಮತ್ತು ಮರಳುಗಾರಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಮಂಗಳೂರಿಂದ ಕಾರವಾರದ ವರೆಗಿನ ಜನ ಸೋತು ಹೋಗಿದ್ದಾರೆ.ಅದರಲ್ಲೂ ಲಾಬಿ ನಡೆಯುತ್ತಿವೆ.ಇದಕ್ಕೆ ರಾಜ್ಯ ಸರಕಾರ ಮೂಲ ಕಾರಣ .ಮರಳುಗಾರಿಕೆ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಗಳು ಮತ್ತು ಎಸಿಯವರಿಗೆ ಹಲ್ಲೆ ನಡೆದಿರುವುದು ತುಂಬಾ ಖೇದಕರ.ಅದನ್ನು ಸರಿಪಡಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ, ಕಾಪು ಕ್ಷೇತ್ರದಲ್ಲಿ ಈಗಾಗಲೇ ತಲೆಎತ್ತಿ ನಿಂತಿರುವ ಕಾರ್ಖಾನೆಗಳಲ್ಲಿ ಹೊರ ರಾಜ್ಯದ ಕಾರ್ಮಿಕರ ಸಂಖ್ಯೆ ಜಾಸ್ತಿಯಾಗಿದ್ದು, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗ ಪಡೆಯುವಲ್ಲಿ ವಂಚಿತರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ.ಅದೆಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ.ಈ ಬಗ್ಗೆ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಲ್ಲಿನ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ. ಈ ಸಮಸ್ಯೆಗಳಿಗೆ ಮುಂಬರುವ ಕುಮಾರಣ್ಣನವರ ಸರಕಾರ ಪರಿಹಾರ ಕಂಡುಕೊಳ್ಳಲಿದೆ ಎಂದು ಮನ್ಸೂರ್ ಇಬ್ರಾಹಿಂ ಭರವಸೆಯನ್ನು ನೀಡಿದರು.
ಜಿಲ್ಲಾ ಜೆಡಿಎಸ್ ಕಾರ್ಯಧ್ಯಕ್ಷ ವಾಸುದೇವ ರಾವ್ , ರಾಜ್ಯ ಕಾರ್ಯದರ್ಶಿ ಶೇಖರ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಕಾಪು ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಯೂಸುಫ್, ಹುಸೇನ್ ಹೈಕಾಡಿ ಹಾಗು ಇನ್ನಿತರ ಜೆಡಿಎಸ್ ಮುಖಂಡರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…