ಬೆಳ್ತಂಗಡಿ: ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ. ಅದರ ಕುರಿತು ಗಮನ ಕೊಡುವುದಿಲ್ಲ. ತನ್ನದೇನಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾತ್ರ ಎಂದು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೃಂಗೇರಿ ಶಾಸಕ ರಾಜೇಗೌಡ ಸ್ಪಷ್ಪಪಡಿಸಿದರು.
ಬಿಜೆಪಿಗೆ ಬರುವಂತೆ ನಿರಂತರ ಒತ್ತಡಗಳು, ಕರೆಗಳು ಬರುತ್ತಿದೆ. ಬಿಜೆಪಿಯ ಹಿರಿಯ ನಾಯಕರುಗಳು ಕರೆ ಮಾಡಿ ಹಣ, ಅಧಿಕಾರದ ಎಲ್ಲ ರೀತಿಯ ಆಮಿಷಗಳನ್ನೂ ಹಾಕುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅದು ಹೆಚ್ಚಾಗಿದೆ. ಆದರೆ ತಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಪ್ರಕಟಿಸಿದರು.
ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಇಳಿಯಲೂ ಸಿದ್ದರಾಗುತ್ತಿದ್ದಾರೆ. ಇದು ಪ್ರಜಾಪ್ತಭುತ್ವವನ್ನು ಅಣಕಿಸುವ ಕಾರ್ಯವಾಗಿದೆ.
ಒಮ್ಮೆ ಚುನಾವಣೆಯಲ್ಲಿ ಗೆದ್ದವರು ಅವಧಿ ಮುಗಿಯುವವರೆಗೂ ಆ ಪಕ್ಷದಲ್ಲಿಯೇ ಉಳಿದುಕೊಳ್ಳಬೇಕು. ಅವಧಿ ಮುಗಿದು ಮುಂದಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದಿದ್ದರೆ ಮಾಡಲಿ ಎಂದರು.
ಬೆಳ್ತಂಗಡಿ ಶಾಸಕರು ಬಂದು ಭೇಟಿಯಾಗಿದ್ದರು ಅವರು ರಾಜಕೀಯ ನಿಲುವುಗಳ ಕುರಿತು ಮಾತ್ರ ಮಾತನಾಡಿದ್ದರು. ಬೇರೆ ಯಾವುದೇ ಆಮಿಷ, ಒತ್ತಡ ಹೇರಿಲ್ಲ. ನಾರ್ಮಲ್ ಭೇಟಿ ಮಾಡಿದ್ದರು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…