ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕುರ್ಚಿಯಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬರುತ್ತದೆ ಎಂಬ ಯತೀಂದ್ರ ಅವರ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವರು, ಯತೀಂದ್ರ ಅವರು ಹೇಳಿದ ಮೇಲೆ ಆಯ್ತಲ್ಲ. ನಾನು ಮಾತನಾಡುವುದೇನಿದೆ? ಈ ವಿಚಾರದಲ್ಲಿ ಏನನ್ನೂ ಮಾತನಾಡುವುದಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.
ಇದನ್ನೂ ಓದಿ:
ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ನಾವು ಸ್ವಾಗತಿಸುತ್ತೇವೆ. ಖರ್ಗೆ ಅವರು ಹಿರಿಯರು, ಅವರ ಸಮಕಾಲೀನರೆಲ್ಲ ಮುಖ್ಯಮಂತ್ರಿ ಆಗಿದ್ದಾರೆ. ವೀರಪ್ಪ ಮೊಯ್ಲಿ, ಗುಂಡೂರಾವ್ ಎಲ್ಲರೂ ಮುಖ್ಯಮಂತ್ರಿ ಆಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಐವತ್ತು ವರ್ಷದ ಸಾಧನೆಯಲ್ಲಿ ಹೈಕಮಾಂಡ್ ಅವರಿಗೆ ಸ್ಥಾನ ಕೊಟ್ಟರೆ ತಪ್ಪೇನಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …