ಶಿವಮೊಗ್ಗ : ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೊರತೆಗಳನ್ನು ನೀಗಿಸಲು ಹೆಚ್ಚುವರಿಯಾಗಿ ಶಿಕ್ಷಕರ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಲು ಸಿಎಂ ಬಳಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ದಿನಾಚರಣೆ ಹಾಗೂ ₹2.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಭಾಂಗಣ ಮತ್ತು ನೂತನ ಆಡಳಿತ ಮಂಡಳಿ ಕಚೇರಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.43 ಸಾವಿರ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ. 32 ಸಾವಿರ ಶಿಕ್ಷಕರ ವರ್ಗಾವಣೆ ಮಾಡಿ ಯಶಸ್ಸು ಕಂಡಿದ್ದೇವೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶವನ್ನು ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ.ಶಿಕ್ಷಣ ಕ್ಷೇತ್ರದ ಅನುಭವವಿಲ್ಲದ ನನಗೆ ಮುಖ್ಯಮಂತ್ರಿ ಅವರು ನೀಡಿದ ಶಿಕ್ಷಣ ಸಚಿವ ಸ್ಥಾನವನ್ನು ದೇವರ ಕೆಲಸ ಎಂದು ಅರಿತು ರಾಜ್ಯದ 76 ಸಾವಿರ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು 1.20 ಕೋಟಿ ವಿದ್ಯಾರ್ಥಿಗಳ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಮಕ್ಕಳ ಭವಿಷ್ಯಕ್ಕಾಗಿ ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧ ಇಲ್ಲದಂತೆ ನ್ಯಾಯಸಮ್ಮತ ಪಠ್ಯ ಪರಿಷ್ಕರಣೆ ಮಾಡಿದ್ದೇವೆ ಎಂದರು. ಶಿಕ್ಷಣ ಇಲಾಖೆಯಲ್ಲೂ ನ್ಯೂನತೆ ಮತ್ತು ಕೊರತೆಗಳಿವೆ. ಅವುಗಳನ್ನು ಸರಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…