ಉಡುಪಿ, : ಜಿಲ್ಲೆಯ ಎಲ್ಲಾ ಖಾಸಗಿ ಅಸ್ಪತ್ರೆಗಳು ತಮ್ಮಲ್ಲಿ ನೀಡುವ ಚಿಕಿತ್ಸೆಯ ದರಗಳನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನಿಗಧಿಪಡಿಸಿದ ದರಗಳನ್ನು ಸಾರ್ವಜನಿರಿಗೆ ಕಾಣುವಂತೆ ಪ್ರದರ್ಶಿಸುವಂತೆ ಆದೇಶಿಸಿದ್ದರೂ ಸಹ ಹಲವು ಕಡೆ , ಸಾರ್ವಜನಿರಿಗೆ ಕಾಣದಂತೆ ಅಸ್ಪತ್ರೆಯ ಯಾವುದೂ ಮೂಲೆಯಲ್ಲಿ ಅಳವಡಿಸಲಾಗಿದೆ ಅಲ್ಲದೆ ಹಲವು ಆಸ್ಪತ್ರೆಗಳಲ್ಲಿ ಈ ಹಿಂದೆ ನಮೂದಿಸಿದ್ದ ದರಗಳೇ ಇದ್ದು, ಪ್ರಸ್ತುತ ಇರುವ ದರಗಳನ್ನು ನಮೂದಿಸಿಲ್ಲ, ಆದ್ದರಿಂದ ಎಲ್ಲಾ ಆಸ್ಪತ್ರೆಗಳು ತಮ್ಮ ಇತ್ತೀಚಿನ ಚಿಕಿತ್ಸೆಯ ದರಗಳನ್ನು ಸ್ಪಷ್ಟವಾಗಿ ಕಾಣುವಂತೆ ನಮೂದಿಸುವಂತೆ ತಿಳಿಸಿದರು.
ಈ ಬಗ್ಗೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಮತ್ತು ಆಸ್ಪತ್ರೆಗಳು ತಮ್ಮ ವೈದ್ಯಕೀಯ ನವೀಕರಣಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ , ದರ ಪ್ರದರ್ಶನದ ಕುರಿತು ಛಾಯಾಚಿತ್ರಗಳನ್ನು ಪಡೆದು ನವೀಕರಣ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…