ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ – Vishwanews24
ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ
ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರದಂದು ಬೆಳಗಿನ ಜಾವ ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಒರ್ವ ವಿದ್ಯಾರ್ಥಿನಿ ಹಾಸ್ಟೇಲ್ ನ ಕಿಟಕಿಯನ್ನು ಮುರಿದು ಪರಾರಿಯಾಗಿದ್ದು, ನಗರದ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ವಿದ್ಯಾರ್ಥಿನಿಯರ ಶೋಧ ಆರಂಭಿಸಿದ ಪೊಲೀಸರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿನಿಯರ ಪೋಷಕರೊಂದಿಗೆ ಕೊಯಮುತ್ತೂರಿಗೆ ತೆರಳಿ ಚೆನ್ನೈ ಪೊಲೀಸರ ಸಹಕಾರದೊಂದಿಗೆ ಚೆನ್ನೈನಲ್ಲಿ ಪತ್ತೆ ಮಾಡಿರುವುದಾಗಿ ತಿಳಿದು ಬಂದಿದೆ
