ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24
ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಡಿಸಲಾಗಿರುವಂತ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಮುಜುರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2015ರಲ್ಲೇ ದೇವಸ್ಥಾನಗಳನ್ನು ನೊಂದಣಿ ಮಾಡಿಕೊಳ್ಳಬೇಕು ಎಂಬುದಾಗಿ ಧಾರ್ಮಿಕ ದತ್ತಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಇದರಿಂದ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಯಾವುದೇ ಹಕ್ಕು ಚಲಾಯಿಸುವುದಿಲ್ಲ. ಸ್ವಾಯತ್ತ ತೆಗೆದುಕೊಳ್ಳುವುದಾಗಲಿ ಇಲ್ಲ ಎಂದು ತಿಳಿಸಿದರು.
ಕೋರ್ಟ್ ಆವರಣದಲ್ಲೇ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ -Vishwanews24
ನೊಂದಣಿ ಪ್ರಕ್ರಿಯೆಯ ಸುತ್ತೋಲೆ ನೆನಪಿನ ಸುತ್ತೋಲೆಯಾಗಿದೆ. ಇದು ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗವಿಲ್ಲ. 2011ರಲ್ಲಿ ಕಾಯ್ದೆ ತಂದಿರುವುದು. 2015ರಲ್ಲಿ ಜಾರಿ ಮಾಡಿದ್ದಾರೆ. ಇದು ಹಲವು ವರ್ಷಗಳಿಂದ ಮುಂದುವರೆದು ಬಂದಿದೆ. ಇಂತಹ ಸುತ್ತೋಲೆಯಾಗಿದೆ. ಇದರಲ್ಲಿ ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ. ಖಾಸಗಿ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.
