ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.
ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಮಾಲೀಕ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ .ಆರ್. ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು 2ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.
ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. 75 ಸಾವಿರ ಕಾರ್ಮಿಕರು ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಅಲ್ಲದೇ ಖಾಸಗಿ ಬಸ್ ಆಪರೇಟರ್‌ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ 1,620 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ 2023ರ ಜು.26ರಂದು ನೀಡಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…