ಶಿವಮೊಗ್ಗ : ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಾಜಲಕ್ಷಿ ಹೆಸರಿನ ಖಾಸಗಿ ಬಸ್ ಶಿರಾಳಕೊಪ್ಪದಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತ, ಕಾರು ಶಿವಮೊಗ್ಗ ಕಡೆಯಿಂದ ಆನವಟ್ಟಿ ಕಡೆಗೆ ಹೊರಟಿತ್ತು.
ಶಿಕಾರಿಪುರ ತಾಲೂಕಿನ ಜಾವಗಟ್ಟಿ ಬಳಿಯ ದೇವಿಕೊಪ್ಪ ಕೆರೆ ಏರಿ ಮೇಲೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ. ಕಾರು ಚಾಲಕ ಜಖಂ ಆದ ಕಾರಿನಲ್ಲಿ ಸಿಲುಕಿಕೊಂಡಿದ್ದು, ರಕ್ಷಿಸಲು ಸಾಧ್ಯವಾಗಿಲ್ಲ.
ಬಸ್‌ನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶಿವಮೊಗ್ಗ ಕಡೆಯಿಂದ ಕಾರು ಹಾಗೂ ಶಿರಾಳಕೊಪ್ಪ ಕಡೆಯಿಂದ ಬರುತ್ತಿದ್ದ ಬಸ್ ಶಿಕಾರಿಪುರ ತಾಲೂಕಿನ ಜಾವಗಟ್ಟಿ ಬಳಿಯ ದೇವಿಕೊಪ್ಪ ಕೆರೆ ಏರಿ ಅಪಘಾತಕ್ಕೀಡಾಗಿವೆ. ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…