“”ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಮೈತ್ರಿ ಸರ್ಕಾರ ರಚಿಸಲಾಗಿದೆಯೇ ಹೊರತು ಖುಷಿಯಿಂದ ಸರ್ಕಾರ ರಚಿಸಿಲ್ಲ” ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಗಣೇಶ ಮೈದಾನದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೂತನ ಸಚಿವ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗುವ ಸ್ಥಿತಿ ಯಾಕೆ ಬಂತು? ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ಯಾಕೆ ಬರಲಿಲ್ಲ? ರಾಜ್ಯದ ಜನರು ಯಾಕೆ ಈ ಶಿಕ್ಷೆ ನೀಡಿದ್ದಾರೆ ಎಂಬುದು ಇಂದಿಗೂ ನನಗೆ ಕಾಡುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ನನಗೆ 11ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದು, ಎಲ್ಲ ಚುನಾವಣೆಗಳಲ್ಲೂ ಗೆಲುವು ಸಾಧಿಸಿದ್ದೇನೆ ಎಂದ ಅವರು, ಇನ್ನೊಂದು ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…