ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಹೃದಯಾಘಾತದಿಂದ ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ.
ವಿಕ್ರಮ್ ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಎಂದು ಪ್ರಕಟಣೆ ಹೇಳಿದೆ. ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಉದ್ಯಮ ವಲಯದ ಗಣ್ಯರು, ಸಮಾಜದ ಹಲವು ಕ್ಷೇತ್ರಗಳ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…