ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.
ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.
ಅಷ್ಟೇ ಅಲ್ಲ ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ಅವರು ನಟಿಸುತ್ತಿದ್ದರು.ನಂ
ನಂದಿನಿ ಅವರ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.
ನಂದಿನಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ ನಿಧನ ಬಳಿಕ ಆ ಕೆಲಸ ತಾನು ಮಾಡುವಂತೆ ಮನೆಯವರು ಒತ್ತಾಯಿಸಿದ್ದರು. ಆದ್ರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲವಂತೆ.
ನೊಂದಿದ್ದ ನಂದಿನಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…