ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ – Vishwanews24

Featured, ರಾಷ್ಟ್ರ ನ್ಯೂಸ್

ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ

ನವದೆಹಲಿ: ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿ ಒಂದಾದ ‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ದಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ ನಟ ಗುರುಚರಣ್ ಸಿಂಗ್ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದು ಅಪಹರಣದ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಗುರುಚರಣ್ ಸಿಂಗ್ ಅವರ ಆಪ್ತ ಸ್ನೇಹಿತೆಯಾಗಿರುವ ಮಿಸ್ ಸೋನಿ ಹೇಳಿಕೆಯಂತೆ ಏಪ್ರಿಲ್ 24 ರಿಂದ ಗುರುಚರಣ್ ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಅವರ ಫೋನ್ ಕೂಡ ಸ್ವಿಚ್ ಆಫ್ ಆಗಿದೆ ಈ ಕುರಿತು ಅವರ ಸ್ನೇಹಿತರು, ಸಂಬಂಧಿಕರ ಬಳಿ ವಿಚಾರಿಸಿದರೂ ಅವರ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಗುರುಚರಣ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರ ಕೊನೆಯ ಪೋಸ್ಟ್ ಕೇವಲ 4 ದಿನಗಳ ಹಿಂದಿನದು, ಅದರಲ್ಲಿ ಅವರು ತಮ್ಮ ತಂದೆಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ – Vishwanews24

ಘಟನೆ ಸಂಬಂಧ ಗುರುಚರಣ್ ಸಿಂಗ್ ಅವರ ತಂದೆ ಹರ್ಗಿತ್ ಸಿಂಗ್ ಅವರು ಶುಕ್ರವಾರ (ಏ. 26) ದೆಹಲಿಯ ಪಾಲಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರುಚರಣ್ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ, ಅಲ್ಲದೆ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಏಪ್ರಿಲ್ 22 ರಂದು ರಾತ್ರಿ 9.14 ಕ್ಕೆ ದೆಹಲಿಯ ಪಾಲಂ ಪ್ರದೇಶದ ಪರಶುರಾಮ್ ಚೌಕ್‌ನಲ್ಲಿ ಗುರುಚರಣ್ ಸಿಂಗ್ ಬೆನ್ನಿಗೆ ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.

ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ – Vishwanews24

Leave a Reply