ನವದೆಹಲಿ: ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿ ಒಂದಾದ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ದಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ ನಟ ಗುರುಚರಣ್ ಸಿಂಗ್ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದು ಅಪಹರಣದ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಗುರುಚರಣ್ ಸಿಂಗ್ ಅವರ ಆಪ್ತ ಸ್ನೇಹಿತೆಯಾಗಿರುವ ಮಿಸ್ ಸೋನಿ ಹೇಳಿಕೆಯಂತೆ ಏಪ್ರಿಲ್ 24 ರಿಂದ ಗುರುಚರಣ್ ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಅವರ ಫೋನ್ ಕೂಡ ಸ್ವಿಚ್ ಆಫ್ ಆಗಿದೆ ಈ ಕುರಿತು ಅವರ ಸ್ನೇಹಿತರು, ಸಂಬಂಧಿಕರ ಬಳಿ ವಿಚಾರಿಸಿದರೂ ಅವರ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಗುರುಚರಣ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರ ಕೊನೆಯ ಪೋಸ್ಟ್ ಕೇವಲ 4 ದಿನಗಳ ಹಿಂದಿನದು, ಅದರಲ್ಲಿ ಅವರು ತಮ್ಮ ತಂದೆಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಗುರುಚರಣ್ ಸಿಂಗ್ ಅವರ ತಂದೆ ಹರ್ಗಿತ್ ಸಿಂಗ್ ಅವರು ಶುಕ್ರವಾರ (ಏ. 26) ದೆಹಲಿಯ ಪಾಲಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರುಚರಣ್ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ, ಅಲ್ಲದೆ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಏಪ್ರಿಲ್ 22 ರಂದು ರಾತ್ರಿ 9.14 ಕ್ಕೆ ದೆಹಲಿಯ ಪಾಲಂ ಪ್ರದೇಶದ ಪರಶುರಾಮ್ ಚೌಕ್‌ನಲ್ಲಿ ಗುರುಚರಣ್ ಸಿಂಗ್ ಬೆನ್ನಿಗೆ ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…