Featured

ಖ್ಯಾತ ಗಾಯಕ ರಘು ದೀಕ್ಷಿತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಹೊಸದಿಲ್ಲಿ:ನಟಿ ತನುಶ್ರೀ ದತ್ತಾ ಅವರು ನಾನಾ ವಿರುದ್ಧ ಆರೋಪ ಮಾಡಿದ ಬಳಿಕ ಮೀಟೂ ಅಭಿಯಾನ ಶುರುವಾಗಿದ್ದು, ಇದೀಗ ಸ್ಯಾಂಡಲ್‍ವುಡ್‍ಗೂ ಕಾಲಿಟ್ಟಿದೆ.

ಇದೀಗ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಕೇಳಿಬಂದಿದೆ. ತಮಿಳಿನ ಖ್ಯಾತ ಗೀತ ಸಾಹಿತಿ ವೈರಮುತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಗಾಯಕಿ ಚಿನ್ಮಯಿ ಶ್ರೀಪಾದ ಅವರು ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಮಾಡಿದ್ದಾರೆ. ಚಿನ್ಮಯ್ ತನ್ನ ಸ್ನೇಹಿತೆಯರಿಗೆ ಆದ ಅನುಭವಗಳನ್ನು ಎರಡು ಪತ್ರಗಳ ಮೂಲಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ರಘು ದೀಕ್ಷಿತ್ ಪರಭಕ್ಷಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೆಲವು ವರ್ಷಗಳ ಹಿಂದೆ ರೆಕಾರ್ಡಿಂಗ್‌ಗಾಗಿ ಅವರ ಸ್ಟುಡಿಯೋಗೆ ಆಹ್ವಾನಿಸಲಾಗಿತ್ತು. ಅವರ ಪತ್ನಿಗೆ ಹುಷಾರಿಲ್ಲ ಎಂದಿದ್ದರು. ಅವರ ಪತ್ನಿ ಒಳ್ಳೆಯರು. ಅವರು ಬಂದ ಕಾರಣ ರೆಕಾರ್ಡಿಂಗ್ ಕೆಲಸ ನಡೆಯಲಿಲ್ಲ. ಕೆಲಸಕ್ಕಾಗಿ ಬಂದಿದ್ದೇನೆ ಎಂದು ಪತ್ನಿ ಬಳಿ ನಟಿಸುವಂತೆ ತಿಳಿಸಿದರು. ಈ ಬಗ್ಗೆ ಅವರ ಜತೆ ವಾಗ್ವಾದ ನಡೆಯಿತು. ಬಳಿಕ ಅವರ ಪತ್ನಿ ಬಂದು ಚೆನ್ನಾಗಿಯೇ ಮಾತನಾಡಿಕೊಂಡು ಹೊರಟು ಹೋದರು. ರೆಕಾರ್ಡಿಂಗ್ ಮುಗಿದ ಬಳಿಕ ಚೆಕ್‌ಗೆ ಸಹಿ ಹಾಕುವ ಸಂದರ್ಭದಲ್ಲಿ ನನ್ನನ್ನು ಹತ್ತಿರಕ್ಕೆ ಬರಸೆಳೆದು ಚುಂಬಿಸುವಂತೆ ಕೇಳಿದರು. ಬಳಿಕ ಬಾಗಿಲ ಬಳಿ ನನ್ನನ್ನು ಎತ್ತಿಕೊಳ್ಳಲು ಪ್ರಯತ್ನಿಸಿದರು, ನಾನಾಗ ಕೂಗುತ್ತಾ ಕೆಳಗೆ ಓಡಿ ಹೋದೆ. ಬಹಳಷ್ಟು ಹೆಣ್ಣುಮಕ್ಕಳು ಅವರ ಕೈಯಲ್ಲಿ ಇದೇ ರೀತಿ ಅನುಭವಿಸಿರುತ್ತಾರೆ ಎಂದು ನನಗೆ ಗೊತ್ತು. ಹೇಸಿಗೆ ಆಗುತ್ತದೆ. ನನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸಲ್ಲ. ನಿಜವಾಗಿ ನನಗೆ ಆ ಗಟ್ಸ್ ಇಲ್ಲ, ನಾನಿನ್ನೂ ಸಂಗೀತದಲ್ಲಿ ನೆಲೆನಿಲ್ಲುತ್ತಿದ್ದೇನೆ” ಎಂದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ”ಚಿನ್ಮಯಿ ಹೇಳಿರುವ ವ್ಯಕ್ತಿಗೆ ನಾನು ಈ ಹಿಂದೆಯೇ ಅವರು ಬಯಸಿದಂತೆ ಸಾರ್ವಜನಿಕವಾಗಿ ಅಲ್ಲದೆ, ಖಾಸಗಿಯಾಗಿ ಕ್ಷಮೆ ಕೋರಿದ್ದೆ. ಮತ್ತೊಮ್ಮೆ ಕೇಳುತ್ತೇನೆ. ಆ ಘಟನೆ ಹೇಗೋ ನಡೆದು ಹೋಯಿತು. ಆದರೆ ಅವರು ವಿವರಿಸಿದಂತೆ ಅಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago