ಹೊಸದಿಲ್ಲಿ:ನಟಿ ತನುಶ್ರೀ ದತ್ತಾ ಅವರು ನಾನಾ ವಿರುದ್ಧ ಆರೋಪ ಮಾಡಿದ ಬಳಿಕ ಮೀಟೂ ಅಭಿಯಾನ ಶುರುವಾಗಿದ್ದು, ಇದೀಗ ಸ್ಯಾಂಡಲ್‍ವುಡ್‍ಗೂ ಕಾಲಿಟ್ಟಿದೆ.
ಇದೀಗ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಕೇಳಿಬಂದಿದೆ. ತಮಿಳಿನ ಖ್ಯಾತ ಗೀತ ಸಾಹಿತಿ ವೈರಮುತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಗಾಯಕಿ ಚಿನ್ಮಯಿ ಶ್ರೀಪಾದ ಅವರು ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಮಾಡಿದ್ದಾರೆ. ಚಿನ್ಮಯ್ ತನ್ನ ಸ್ನೇಹಿತೆಯರಿಗೆ ಆದ ಅನುಭವಗಳನ್ನು ಎರಡು ಪತ್ರಗಳ ಮೂಲಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
“ರಘು ದೀಕ್ಷಿತ್ ಪರಭಕ್ಷಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೆಲವು ವರ್ಷಗಳ ಹಿಂದೆ ರೆಕಾರ್ಡಿಂಗ್‌ಗಾಗಿ ಅವರ ಸ್ಟುಡಿಯೋಗೆ ಆಹ್ವಾನಿಸಲಾಗಿತ್ತು. ಅವರ ಪತ್ನಿಗೆ ಹುಷಾರಿಲ್ಲ ಎಂದಿದ್ದರು. ಅವರ ಪತ್ನಿ ಒಳ್ಳೆಯರು. ಅವರು ಬಂದ ಕಾರಣ ರೆಕಾರ್ಡಿಂಗ್ ಕೆಲಸ ನಡೆಯಲಿಲ್ಲ. ಕೆಲಸಕ್ಕಾಗಿ ಬಂದಿದ್ದೇನೆ ಎಂದು ಪತ್ನಿ ಬಳಿ ನಟಿಸುವಂತೆ ತಿಳಿಸಿದರು. ಈ ಬಗ್ಗೆ ಅವರ ಜತೆ ವಾಗ್ವಾದ ನಡೆಯಿತು. ಬಳಿಕ ಅವರ ಪತ್ನಿ ಬಂದು ಚೆನ್ನಾಗಿಯೇ ಮಾತನಾಡಿಕೊಂಡು ಹೊರಟು ಹೋದರು. ರೆಕಾರ್ಡಿಂಗ್ ಮುಗಿದ ಬಳಿಕ ಚೆಕ್‌ಗೆ ಸಹಿ ಹಾಕುವ ಸಂದರ್ಭದಲ್ಲಿ ನನ್ನನ್ನು ಹತ್ತಿರಕ್ಕೆ ಬರಸೆಳೆದು ಚುಂಬಿಸುವಂತೆ ಕೇಳಿದರು. ಬಳಿಕ ಬಾಗಿಲ ಬಳಿ ನನ್ನನ್ನು ಎತ್ತಿಕೊಳ್ಳಲು ಪ್ರಯತ್ನಿಸಿದರು, ನಾನಾಗ ಕೂಗುತ್ತಾ ಕೆಳಗೆ ಓಡಿ ಹೋದೆ. ಬಹಳಷ್ಟು ಹೆಣ್ಣುಮಕ್ಕಳು ಅವರ ಕೈಯಲ್ಲಿ ಇದೇ ರೀತಿ ಅನುಭವಿಸಿರುತ್ತಾರೆ ಎಂದು ನನಗೆ ಗೊತ್ತು. ಹೇಸಿಗೆ ಆಗುತ್ತದೆ. ನನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸಲ್ಲ. ನಿಜವಾಗಿ ನನಗೆ ಆ ಗಟ್ಸ್ ಇಲ್ಲ, ನಾನಿನ್ನೂ ಸಂಗೀತದಲ್ಲಿ ನೆಲೆನಿಲ್ಲುತ್ತಿದ್ದೇನೆ” ಎಂದಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ”ಚಿನ್ಮಯಿ ಹೇಳಿರುವ ವ್ಯಕ್ತಿಗೆ ನಾನು ಈ ಹಿಂದೆಯೇ ಅವರು ಬಯಸಿದಂತೆ ಸಾರ್ವಜನಿಕವಾಗಿ ಅಲ್ಲದೆ, ಖಾಸಗಿಯಾಗಿ ಕ್ಷಮೆ ಕೋರಿದ್ದೆ. ಮತ್ತೊಮ್ಮೆ ಕೇಳುತ್ತೇನೆ. ಆ ಘಟನೆ ಹೇಗೋ ನಡೆದು ಹೋಯಿತು. ಆದರೆ ಅವರು ವಿವರಿಸಿದಂತೆ ಅಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…