ಖ್ಯಾತ ಪಂಜಾಬಿ ಪಾಪ್ ಗಾಯಕ ದಲೇರ್ ಮೆಹಂದಿ ಬಿಜೆಪಿಗೆ ಸೇರ್ಪಡೆ – Vishwanews24

Featured, ರಾಷ್ಟ್ರ ನ್ಯೂಸ್

ಹೊಸದಿಲ್ಲಿ: ಖ್ಯಾತ ಪಂಜಾಬಿ ಪಾಪ್ ಗಾಯಕ ದಲೇರ್ ಮೆಹಂದಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ಸಚಿವ ವಿಜಯ್ ಗೋಯಲ್ ಮತ್ತು ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು.

ವಾಯುವ್ಯ ದಿಲ್ಲಿಯ ಬಿಜೆಪಿ ಅಭ್ಯರ್ಥಿ ಹನ್ಸ್ ರಾಜ್ ಹನ್ಸ್, ಚಾಂದ್‌ನಿ ಚೌಕ್‌ ಕ್ಷೇತ್ರದ ಅಭ್ಯರ್ಥಿ ಹರ್ಷವರ್ಧನ್ ಮತ್ತು ಕ್ರಿಕೆಟಿಗ-ರಾಜಕಾರಣಿ ಗೌತಮ್ ಗಂಭೀರ್ ಈ ಸಂದರ್ಭದಲ್ಲಿ ಹಾಜರಿದ್ದರು.

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಹಲವು ಮಂದಿ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದಾರೆ.

ದಲೇರ್‌ ಅವರು ತಮ್ಮ ಮೊದಲ ಆಲ್ಬಂ ‘ಬೋಲೊ ತಾರಾ ರಾ’ ಹಾಡಿನಲ್ಲೇ ಅಪಾರ ಖ್ಯಾತಿ ಗಳಿಸಿದ್ದರು. ಬಳಿಕ ಹಲವು ಹಿಂದಿ ಚಿತ್ರಗಳಿಗೆ ಅವರು ಹಾಡಿದ್ದರು.