Featured

ಗಂಗೊಳ್ಳಿ : ಉಡುಪಿಯಲ್ಲಿ ಗೋಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿ : ಎಸ್ ಪಿ ವಿಷ್ಣುವರ್ಧನ್ -Vishwanews24

ಗಂಗೊಳ್ಳಿ : ಉಡುಪಿಯಲ್ಲಿ ಗೋಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿ : ಎಸ್ ಪಿ ವಿಷ್ಣುವರ್ಧನ್ -Vishwanews24

ಗಂಗೊಳ್ಳಿ : ರಾಜ್ಯದಲ್ಲಿ ಜಾರಿಯಾಗಿರುವ ಗೋಹತ್ಯೆ ನಿಷೇಧ ಕಾನೂನನ್ನು ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಗೋ ಕಳ್ಳತನ, ಗೋಹತ್ಯೆ ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಸುಮಾರು 20 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ತಡೆಯುವ ಪ್ರಕ್ರಿಯೆ ನಿರಂತವಾಗಿದ್ದು, ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು, ಈ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಆರೋಪಿಗಳನ್ನು ಬಂಧಿಸಲಾಗಿದೆ. ನೂರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದರು.

ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಗಂಗೊಳ್ಳಿಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ಜರಗಿದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಂಗೊಳ್ಳಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಸಾಕಷ್ಟು ಸಾಕ್ಷಾಧಾರಗಳಿದ್ದು, ಅಮಾಯಕರಿಗೆ ತೊಂದರೆಯಾದಂತೆ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜದಲ್ಲಿ ಶಾಂತಿ ಕದಡುವ, ಸಮಾಜ ಘಾತುಕ ಶಕ್ತಿಗಳನ್ನು ಬೆಂಬಲಿಸಬಾರದು. ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಾಗರಿಕರು ಇಲಾಖೆಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕಿದೆ. ಕಾನೂನಿಗೆ ಗೌರವ ನೀಡಬೇಕು. ಯಾರೇ ಕಾನೂನಿಗೆ ವಿರುದ್ಧವಾಗಿ ಹೋದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಶ್ರೀಕಾಂತ ಮಾತನಾಡಿ, ಗಂಗೊಳ್ಳಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಈವರೆಗೆ 4 ಪ್ರಕರಣಗಳು ದಾಖಲಾಗಿವೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎರಡೂ ಸಮುದಾಯದ ಮುಖಂಡರು ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ವ್ಯಕ್ತಿಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ಮುಂದಾಗಬಹುದಾದ ಅಹಿತಕರ ಘಟನೆಗಳನ್ನು ತಪ್ಪಿಸಲು ಸಹಕರಿಸಬೇಕು ಎಂದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

14 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

15 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago