ಗಂಗೊಳ್ಳಿ : ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಸುತ್ತಿರುವ ಪ್ರತಿಭಟನೆ ಅಂಗವಾಗಿ ಅಕ್ಟೋಬರ್ 1ರ ಶುಕ್ರವಾರ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಜಾನುವಾರು ಹತ್ಯೆ ಹಾಗೂ ಗೋ ಹಂತಕರ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗುತ್ತಿದ್ದಾರೆ. ಮಾತ್ರವಲ್ಲದೆ ಗಂಗೊಳ್ಳಿಯಲ್ಲಿ ಈ ಸಂಬಂಧ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ.
ಗಂಗೊಳ್ಳಿಯ ಮೀನುಗಾರಿಕಾ ಬಂದರು ನಿಂದ ಹೊರಟಿರುವ ಸಾವಿರಕ್ಕೂ ಅಧಿಕ ಜನರು ಪ್ರಮುಖ ಬೀದಿಗಳ ಮೂಲಕ ಸಾಗಿ ಬಂದು ರಾಮಮಂದಿರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಮೆರವಣಿಗೆ ಮಾರ್ಗ ಮಧ್ಯೆ ಮಾತಿನ ಚಕಮಕಿ ಉಂಟಾಗಿದ್ದು ಸ್ಥಳಕ್ಕೆ ಧಾವಿಸಿದ ಡಿ.ವೈ.ಎಸ್.ಪಿ ಶ್ರೀಕಾಂತ್, ವ್ರತ್ತನೀರಿಕ್ಷಕ ಸಂತೋಷ್ ಕಾಯ್ಕಿಣಿ ಘಟನೆ ಪರಿಸ್ಥಿತಿ ಹತೋಟಿಗೆ ತಂದರು.
ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಪ್ರತಿಭಟನಾ ನಿರತರು ಗೋ ಕಳ್ಳರ ವಿರುದ್ಧ ಆಕ್ರೋಶದ ಘೋಷಣೆ ಕೂಗಿದ್ದಾರೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…