ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

Featured, ಉಡುಪಿ

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು

ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ – ಮುಳ್ಳಿಕಟ್ಟೆ ಫೈಓವರ್ ಮೇಲೆ ಮೀನು ಸಾಗಿಸುತ್ತಿದ್ದ ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆಗಿ ರಸ್ತೆಗೆ ಮುಗುಚಿ ಬಿದ್ದ ಘಟನೆ ನ.6 ಶುಕ್ರವಾರ ಸಂಭವಿಸಿದೆ.

ಮಹಾರಾಷ್ಟ್ರ ನೋಂದಣಿಯ ಈ ವಾಹನವು ಮುಂಬೈಯಿಂದ ಕುಂದಾಪುರದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಾಲನೆ ವೇಳೆಯಲ್ಲಿ ದಿಢೀರನೆ ಟೈರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಟನೆಯ ಸಮಯದಲ್ಲಿ ವಾಹನದಲ್ಲಿ ಚಾಲಕ ಒಬ್ಬರೇ ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸದೇ ಪವಾಡಸಾದೃಶ್ಯವಾಗಿ ಪಾರಾಗಿದ್ದಾರೆ.

ಉಡುಪಿ : ನೇರ ಸಂದರ್ಶನ – vishwanews24

 

ವಿಷಯ ತಿಳಿಯುತ್ತಿದ್ದಂತೆಯೇ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಹೈವೇ ಪೆಟ್ರೋಲ್ (ಹೆದ್ದಾರಿ ಗಸ್ತು) ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಮೂಲಕ ಪಲ್ಟಿಯಾಗಿದ್ದ ವಾಹನವನ್ನು ಮೇಲೆತ್ತಿ ತೆರವುಗೊಳಿಸಲಾಯಿತು.

ಪೊಲೀಸರ ತ್ವರಿತ ಕಾರ್ಯಾಚರಣೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಉಡುಪಿ : ನೇರ ಸಂದರ್ಶನ – vishwanews24

Leave a Reply