ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ (ಏ.17) ರಾತ್ರಿ ಗ್ರಾಮದ ಹೊರವಲಯದ ನಿರ್ಮಾಣ ಹಂತದ ಮನೆಯೊಂದರ ಬಳಿ ನಾನ್ ವೆಜ್ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ವೇಳೆ ಸಚಿನ್, ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ವಾಪಸ್ಸಾಗಿದ್ದರು. ಶುಕ್ರವಾರ (ಏ.18) ಮುಂಜಾನೆ ಕಾಮಗಾರಿ ಮುಂದುವರಿಸಲು ಕೆಲಸಗಾರರು ಕಟ್ಟಡದ ಬಳಿ ಬಂದಾಗ, ಸಚಿನ್ ಅಲ್ಲಿ ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:
ಈ ವಿಚಾರ ತಿಳಿದ ತಕ್ಷಣ ಸಚಿನ್‌ನ ಕುಟುಂಬದವರು ಆತಂಕಗೊಂಡು ಶವವನ್ನು ಶಿವಮೊಗ್ಗಕ್ಕೆ ಕೊಂಡೊಯ್ದಿದ್ದರು. ಘಟನೆಯ ಕುರಿತು ಗ್ರಾಮಸ್ಥರು ಕುಂಸಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…