ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್‍ನಲ್ಲಿ ನಡೆದಿದೆ.
ಐಟಿ ಉದ್ಯಮಿ ಆಗಿರುವ ಶ್ವೇತಾ (27) ನ.10ರಂದು ನೇಣಿಗೆ ಶರಣಾಗಿದ್ದಾಳೆ. ಐಬಿಎಂ ಕಂಪನಿಯ ಉದ್ಯೋಗಿಯಾಗಿದ್ದ ಶ್ವೇತಾ 11 ತಿಂಗಳ ಹಿಂದಷ್ಟೇ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಆದರೆ ಮದುವೆಗೂ ಮುನ್ನ ಅಭಿಷೇಕ್‍ಗೆ ಯುವತಿಯೊಬ್ಬಳೊಂದಿಗೆ ಸಂಬಂಧವಿತ್ತು ಎನ್ನುವ ವಿಷಯವು ಶ್ವೇತಾಳಿಗೆ ಮದುವೆಯಾದ ಬಳಿಕ ತಿಳಿದಿದೆ. ಈ ವಿಚಾರ ಗೊತ್ತಾದ ಬಳಿಕ ಶ್ವೇತಾ ಹಾಗೂ ಅಭಿಷೇಕ್ ಮಧ್ಯೆ ಪ್ರತಿನಿತ್ಯ ಜಗಳವಾಗುತ್ತಿತ್ತು.
ಅದಾದ ಬಳಿಕ ಪರಸ್ಪರ ರಾಜಿ ಪಂಚಾಯತಿ ನಡೆದಿತ್ತು. ಆ ನಂತರ ಅಭಿಷೇಕ್ ಹಾಗೂ ಶ್ವೇತಾ ಇಬ್ಬರೂ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ನಡುವೆ ಅಭಿಷೇಕ್ ತನ್ನ ಹಳೆಯ ಚಾಳಿಯನ್ನೇ ಪುನಃ ಮುಯಂದುವರಿಸಿದ್ದಾನೆ. ಇದರಿಂದಾಗಿ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪಗಳು ಮೃತ ಶ್ವೇತಾಳ ಕುಟುಂಬದಿಂದ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾಳ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಪತ್ನಿಯ ಅಂತ್ಯ ಸಂಸ್ಕಾರದ ಬಳಿಕ ಅಭಿಷೇಕ್ ಸತ್ಯ ಒಪ್ಪಿಕೊಂಡಿದ್ದು, ಮದುವೆಗೂ ಮುನ್ನ ಇನ್ನೋರ್ವ ಯುವತಿಯ ಜೊತೆ ಸಂಬಂಧ ಹೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಶ್ವೇತಾಳೊಂದಿಗೆ ಮದುವೆ ನಿಶ್ಚಯವಾದ ನಂತರವೂ ಅದೇ ಯುವತಿಯೊಂದಿಗೆ ಟೂರ್ ಹೋಗಿದ್ದ. ಅಷ್ಟೇ ಅಲ್ಲದೇ ಮದುವೆಯ ನಂತರವೂ ಅನೈತಿಕ ಸಂಬಂಧ ಮುಂದುವರಿಸಿದ್ದ. ಈ ವಿಚಾರ ತಿಳಿದು ಶ್ವೇತಾ ಗಲಾಟೆ ಮಾಡಿದ್ದಳು. ಆ ಬಳಿಕ ಪತ್ನಿಯ ಬಳಿ ಕ್ಷಮೆಯಾಚಿಸಿ ಸುಮ್ಮನಾಗಿರುವ ಬಗ್ಗೆ ತಿಳಿಸಿದ್ದಾನೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…