ಮಡಿಕೇರಿ: ದಸರಾಗೆ ತೆರಳಬೇಕಿದ್ದ ಸಾಕಾನೆಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಗಾಯಗೊಂಡಿದ್ದ ದಸರಾ ಆನೆ ಮೃತಪಟ್ಟಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮತ್ತಿಗೋಡು ಆನೆ ಶಿಬಿರದ 45 ವರ್ಷ ವಯಸ್ಸಿನ ರಂಗ ಎನ್ನುವ ಸಾಕಾನೆಯ ಸೊಂಟ ಮುರಿದಿದೆ. ಮಾವುತರು ಎಂದಿನಂತೆ ಭಾನುವಾರ ರಾತ್ರಿ ರಂಗನನ್ನು ತಿರುಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಆನೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆನೆ ಸ್ಥಳದಲ್ಲೇ ಕುಸಿದು ಬಿದ್ದು, ಸೊಂಟ ಮುರಿದಿತ್ತು
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಾವುತರು ಹಾಗೂ ಪುಶುವೈದ್ಯ ಡಾ.ಮುಜೀಬ್ ಸಹಾಯದಿಂದ ಆನೆಗೆ ಚಿಕಿತ್ಸೆ ನೀಡಿ, ಶಿಬಿರಕ್ಕೆ ಕರೆತರಲಾಗಿತ್ತು. ಆದ್ರೆ ತೀವ್ರ ಗಾಯಗೊಂಡಿದ್ದ ಆನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಪುಂಡಾಟ ನಡೆಸುತ್ತಿದ್ದ ಆನೆಯನ್ನು ಸೆರೆ ಹಿಡಿದು, ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿತ್ತು. ರೌಡಿ ರಂಗ ಎಂದೇ ಹೆಸರು ಪಡೆದಿತ್ತು.
ಇನ್ನೆರಡು ದಿನ ಕಳೆದಿದ್ದರೆ ರಂಗ ದಸರಾದಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು. ಇನ್ನು ಘಟನೆ ಸಂಬಂಧ ಖಾಸಗಿ ಬಸ್ ಚಾಲಕನ ವಿರುದ್ಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…