Featured

ಗಜರಾಜನಿಗೆ ಡಿಕ್ಕಿಯಾದ ಖಾಸಗಿ ಬಸ್ ; ದಸರಾ ಆನೆ ರಂಗ ದುರ್ಮರಣ..

ಮಡಿಕೇರಿ: ದಸರಾಗೆ ತೆರಳಬೇಕಿದ್ದ ಸಾಕಾನೆಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಗಾಯಗೊಂಡಿದ್ದ ದಸರಾ ಆನೆ ಮೃತಪಟ್ಟಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮತ್ತಿಗೋಡು ಆನೆ ಶಿಬಿರದ 45 ವರ್ಷ ವಯಸ್ಸಿನ ರಂಗ ಎನ್ನುವ ಸಾಕಾನೆಯ ಸೊಂಟ ಮುರಿದಿದೆ. ಮಾವುತರು ಎಂದಿನಂತೆ ಭಾನುವಾರ ರಾತ್ರಿ ರಂಗನನ್ನು ತಿರುಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಆನೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆನೆ ಸ್ಥಳದಲ್ಲೇ ಕುಸಿದು ಬಿದ್ದು, ಸೊಂಟ ಮುರಿದಿತ್ತು

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಾವುತರು ಹಾಗೂ ಪುಶುವೈದ್ಯ ಡಾ.ಮುಜೀಬ್ ಸಹಾಯದಿಂದ ಆನೆಗೆ ಚಿಕಿತ್ಸೆ ನೀಡಿ, ಶಿಬಿರಕ್ಕೆ ಕರೆತರಲಾಗಿತ್ತು. ಆದ್ರೆ ತೀವ್ರ ಗಾಯಗೊಂಡಿದ್ದ ಆನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಪುಂಡಾಟ ನಡೆಸುತ್ತಿದ್ದ  ಆನೆಯನ್ನು   ಸೆರೆ ಹಿಡಿದು, ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿತ್ತು. ರೌಡಿ ರಂಗ ಎಂದೇ ಹೆಸರು ಪಡೆದಿತ್ತು.

ಇನ್ನೆರಡು ದಿನ ಕಳೆದಿದ್ದರೆ ರಂಗ ದಸರಾದಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು.  ಇನ್ನು ಘಟನೆ ಸಂಬಂಧ ಖಾಸಗಿ ಬಸ್ ಚಾಲಕನ ವಿರುದ್ಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

16 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago