ಗಡಿಯಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಿ: ಸೇನೆಗೆ ರಾವತ್ ಸೂಚನೆ – Vishwanews24
ನವದೆಹಲಿ,- ಪಾಕಿಸ್ಥಾನ ಮತ್ತು ಭಾರತ ನಡುವೆ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧರಾಗಿರಿ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾರತೀಯ ಸೇನೆಗೆ ಕರೆ ನೀಡಿದ್ದಾರೆ.
ಪಾಕಿಸ್ಥಾನಕ್ಕೆ ಹೊಂದಿಕೊಂಡಿರುವ ಜಮ್ಮು-ಕಾಶ್ಮೀರ ಸೇರಿದಂತೆ ರಾಜಸ್ಥಾನದ ಅಂತಾರಾಷ್ಟ್ರೀಯ ಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಬಿಪಿನ್ ರಾವತ್ ಅವರು ಭಾರತೀಯ ಯೋಧರಿಗೆ ಎಂತಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ ಎಂದು ಹೇಳಿದ್ದಾರೆ.
ದೇಶದ ಭದ್ರತೆ ಕುರಿತಂತೆ ಪರಿಸ್ಥಿತಿ ವಿಷಮಕ್ಕೆ ತಿರುಗಿದ್ದು, ಯಾವಾಗ ಏನಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲು ಸಮರ್ಥರಾಗಿ ಎಂದು ಬಿಪಿನ್ ರಾವತ್ ಹೇಳಿದ್ದಾರೆ.
