ದೆಹಲಿ: ಟೆಂಡರ್ ಅವಧಿ ಮುಗಿದಿದ್ದರೂ ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ ಬಿದ್ದಿರುವ ತನಿಕೋಡು ಗೇಟ್‌ನಿಂದ ಎಸ್.ಕೆ. ಬಾರ್ಡರ್ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು ತುರ್ತು ಪರಿಹರಿಸಬೇಕೆಂದು ಉಡುಪಿ ಚಿಕ್ಕಮಗಳೂರು ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವ ಗಡ್ಕರಿ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಆದೇಶ ನೀಡಿದ್ದಾರೆ.
ಡಿಸೆಂಬರ್ ಒಳಗೆ ತಾನೇ ಎಲ್ಲಾ ಕಾಮಗಾರಿಗಳನ್ನು ಉದ್ಘಾಟಿಸುವುದಾಗಿ ಕೇಂದ್ರ ಸಚಿವರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಂಸದ ಬಿ ವೈ ರಾಘವೇಂದ್ರ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…