Featured

ಗಡ್ಕರಿ ಭೇಟಿಯಾದ ಸಂಸದ ಕೋಟ : ಸಂತೆಕಟ್ಟೆ-ಇಂದ್ರಾಳಿ ಎನ್‌ಹೆಚ್ ಕಾಮಗಾರಿ ತುರ್ತು ನಡೆಸಲು ಮನವಿ – vishwanews24

ಗಡ್ಕರಿ ಭೇಟಿಯಾದ ಸಂಸದ ಕೋಟ : ಸಂತೆಕಟ್ಟೆ-ಇಂದ್ರಾಳಿ ಎನ್‌ಹೆಚ್ ಕಾಮಗಾರಿ ತುರ್ತು ನಡೆಸಲು ಮನವಿ

ದೆಹಲಿ: ಟೆಂಡರ್ ಅವಧಿ ಮುಗಿದಿದ್ದರೂ ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ ಬಿದ್ದಿರುವ ತನಿಕೋಡು ಗೇಟ್‌ನಿಂದ ಎಸ್.ಕೆ. ಬಾರ್ಡರ್ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು ತುರ್ತು ಪರಿಹರಿಸಬೇಕೆಂದು ಉಡುಪಿ ಚಿಕ್ಕಮಗಳೂರು ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವ ಗಡ್ಕರಿ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಆದೇಶ ನೀಡಿದ್ದಾರೆ.

ಡಿಸೆಂಬರ್ ಒಳಗೆ ತಾನೇ ಎಲ್ಲಾ ಕಾಮಗಾರಿಗಳನ್ನು ಉದ್ಘಾಟಿಸುವುದಾಗಿ ಕೇಂದ್ರ ಸಚಿವರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಂಸದ ಬಿ ವೈ ರಾಘವೇಂದ್ರ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago