Featured

ಗಣರಾಜೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ – Vishwanews24

ಗಣರಾಜೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ

ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ  ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ  ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ.

13ವರ್ಷಗಳಿಂದ ಕರ್ನಾಟಕ ಗಣರಾಜೋತ್ಸವ ಪರೇಡ್‌ನಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿತ್ತು. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಕರ್ನಾಟಕಕ್ಕೆ ಅನುಮತಿ ಇಲ್ಲ ಎಂದು ಟ್ಯಾಬ್ಲೋ ಆಯ್ಕೆ ಸಮಿತಿ ಹೇಳಿತ್ತು. ಸಮಿತಿಯ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಕರ್ನಾಟಕಕ್ಕೆ  ಆದ ಅನ್ಯಾಯವನ್ನು ಜನರು ಸೋಶಿಯಲ್ ಮೀಡಿಯಾಗಳಲ್ಲಿ ಕೂಡ ಮತ್ತು ರಾಜ್ಯ ಬಿಜೆಪಿ  ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದನ್ನೆಲ್ಲ ಗಮನಿಸಿದ ರಾಜ್ಯ ಸರ್ಕಾರ ಕೇಂದ್ರದ ಮಟ್ಟದಲ್ಲಿ ಒತ್ತಡ ತರುವ ಪ್ರಯತ್ನ ಮಾಡಿತ್ತು.

ಚುನಾವಣಾ ವರ್ಷದಲ್ಲಿ ವಿವಾದಗಳನ್ನು ಸೃಷ್ಟಿಸಲು ಹಿಂಜರಿದಿರುವ ಕೇಂದ್ರ ಸರ್ಕಾರ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲೇ ಆಯ್ಕೆ ಸಮಿತಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿದ್ದು, 14 ಬಾರಿ ಕರ್ತವ್ಯ ಪಥ್‌ನಲ್ಲಿ ರಾಜ್ಯದ ಟ್ಯಾಬ್ಲೋ ಪ್ರದರ್ಶನಗೊಳ್ಳಲಿದೆ.

Vishwa News 24

Recent Posts

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

18 hours ago

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ – vishwanews24

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…

18 hours ago

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ – vishwanews24

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…

18 hours ago

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…

19 hours ago

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ…

19 hours ago

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…

19 hours ago