ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರ ಟ್ರಾಕ್ಟರ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಹಾಗೂ ಕೆಲ ಕಿಡಿಗೇಡಿಗಳು ಕೆಂಪುಕೋಟೆಗೆ ಲಗ್ಗೆ ಇಟ್ಟು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಷಾದ ವ್ಯಕ್ತಪಡಿಸಿದರು.
ದೇಶದ ಸಂವಿಧಾನವು ನಮಗೆ ಅಭಿಪ್ರಾಯ ಸ್ವಾತಂತ್ರ್ಯ ನೀಡಿದೆ. ಅದೇ ಸಂವಿಧಾನವು ಕಾನೂನು ಕಟ್ಟಳೆಗಳನ್ನ ಗಂಭೀರವಾಗಿ ಪಾಲನೆ ಮಾಡಬೇಕೆಂದು ಹೇಳುತ್ತದೆ. ಇದನ್ನು ಮರೆತು ಜನರು ಸ್ವಾತಮತ್ರ್ಯವನ್ನು ದುರುಪಯೋಗ ಮಾಡಿಕೊಳ್ಳುವುದು ದುರದೃಷ್ಟಕರ ಎಂದು ಕೋವಿಂದ್ ಅಭಿಪ್ರಾಯಪಟ್ಟರು.
ರೈತರ ಸಮಸ್ಯೆ ಮತ್ತು ಪ್ರತಿಭಟನೆಗಳ ವಿಚಾರವನ್ನು ಇನ್ನಷ್ಟು ವಿಸ್ತೃತವಾಗಿ ಪ್ರಸ್ತಾಪಿಸಿದ ರಾಮನಾಥ್ ಕೋವಿಂದ್, ತಮ್ಮ ಸರ್ಕಾರ ಮೂರು ಕೃಷಿ ಕಾನೂನುಗಳನ್ನ ರಚಿಸುವ ಮುನ್ನ ಅಸ್ತಿತ್ವದಲ್ಲಿದ್ದ ರೈತರ ಹಕ್ಕು ಮತ್ತು ಸೌಲಭ್ಯಗಳಿಗೆ ಕತ್ತರಿ ಹಾಕಿಲ್ಲ. ಬದಲಾಗಿ ಈ ಮೂರು ಕೃಷಿ ಕಾಯ್ದೆಗಳು ರೈತರಿಗೆ ಹೊಸ ಸೌಲಭ್ಯ ಮತ್ತು ಹಕ್ಕುಗಳನ್ನ ಒದಗಿಸಿದೆ. ಸಂಸತ್ನಲ್ಲಿ ಚರ್ಚೆಯ ಬಳಿಕ ಈ ಮೂರು ಕಾನೂನುಗಳನ್ನ ಜಾರಿಗೆ ತಂದ ನಂತರ ರೈತರಿಗೆ ಇದರ ಲಾಭ ಸಿಗಲು ಆರಂಭವಾಗಿದೆ ಎಂಬುದನ್ನ ವಿವರಿಸಿದರು.
ಆತ್ಮನಿರ್ಭರ್ (ಸ್ವಾವಲಂಬನೆ) ಭಾರತ್ ಗುರಿಯು ಕೃಷಿ ಕ್ಷೇತ್ರಕ್ಕೂ ಅನ್ವಯ ಆಗುತ್ತದೆ. ಸರ್ಕಾರದ ಗಮನ ಈ ನಿಟ್ಟಿನಲ್ಲೂ ಇದೆ. ಸ್ವಾಮಿನಾಥನ್ ಆಯೋಗದ ಶಿಫಾರಸಿನ ಪ್ರಕಾರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿ ಮಾಡಲು ಸರ್ಕಾರ ನಿರ್ಧರಿಸಿದೆ. ಸಣ್ಣ ಹಾಗೂ ಅತಿಸಣ್ಣ ರೈತರು ನನ್ನ ಸರ್ಕಾರಕ್ಕೆ ಆದ್ಯತೆಯಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಇಂಥ ಸಣ್ಣ ರೈತರ ಖಾತೆಗಳಿಗೆ ಸರ್ಕಾರ 1.13 ಕೋಟಿ ರೂ ಹಣ ನೇರವಾಗಿ ವರ್ಗಾವಣೆ ಆಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ತಿಳಿಸಿದರು.
ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…