Featured

ಗಣರಾಜ್ಯೋತ್ಸವ ಪರೇಡ್‍ನಲ್ಲಿ 13 ವರ್ಷಗಳ ಬಳಿಕ ಈ ಬಾರಿ  ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ – Vishwanews24

ಗಣರಾಜ್ಯೋತ್ಸವ ಪರೇಡ್‍ನಲ್ಲಿ  13 ವರ್ಷಗಳ ಬಳಿಕ ಈ ಬಾರಿ  ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

ಬೆಂಗಳೂರು: ಸತತ 13 ವರ್ಷಗಳಿಂದ ಗಣರಾಜ್ಯೋತ್ಸವ  ಪರೇಡ್‍ನಲ್ಲಿ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಥಬ್ಧಚಿತ್ರದಲ್ಲಿ ಪ್ರದರ್ಶಿಸುತ್ತಿದ್ದ ಕರ್ನಾಟಕವು ಈ ಬಾರಿ ಅವಕಾಶವನ್ನು ಕಳೆದುಕೊಂಡಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು ಪರೇಡ್‍ನಲ್ಲಿ ಕರ್ನಾಟಕ 13 ವರ್ಷಗಳ ನಂತರ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದರು.

ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು. ಆದರೆ ಕೊನೆಯ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರನ್ನು ತಿರಸ್ಕರಿಸಲಾಗಿದೆ. ಅಲ್ಲದೇ ಇತರ ರಾಜ್ಯಗಳು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡುತ್ತಿದ್ದಾರೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಕರ್ನಾಟಕವು ಸ್ಥಬ್ಧಚಿತ್ರಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿತ್ತು. ಅಷ್ಟೇ ಅಲ್ಲದೇ ಕೆಲವು ಸೃಜನಶೀಲ ಹಾಗೂ ವರ್ಣರಂಜಿತ ಸ್ಥಬ್ಧಚಿತ್ರಕ್ಕಾಗಿ ವ್ಯಾಪಕ ಮೆಚ್ಚುಗೆಯನ್ನು ಪಡೆದಿದೆ. 2022ರ ಗಣರಾಜ್ಯೋತ್ಸವದಂದು ಕರ್ನಾಟಕ ಪ್ರದರ್ಶಿಸಿದ್ದ ಸ್ಥಬ್ಧ ಚಿತ್ರಕ್ಕೆ 2ನೇ ಸ್ಥಾನ ಪಡೆದಿತ್ತು. ರಾಜ್ಯವು ಹೆಚ್ಚಾಗಿ ಜಾನಪದ, ಜೀವವೈವಿಧ್ಯ, ಕರಕುಶಲ ಈ ರೀತಿಯ ವಿಷಯವನ್ನೆ ಹೆಚ್ಚು ಕೇಂದ್ರಿಕರಿಸುತ್ತಾ ಬಂದಿದೆ.

2022ರ ಗಣರಾಜ್ಯೋತ್ಸವದಲ್ಲಿ ಕೇರಳ ಸಲ್ಲಿಸಿದ್ದ ನಾರಾಯಣಗುರು ಸ್ಥಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿರಲಿಲ್ಲ. ಇದರಿಂದಾಗಿ ನಾರಾಯಣಗುರು ಅನುಯಾಯಿಗಳ ಕೆಂಗಣ್ಣಿಗೆ ಕೇಂದ್ರ ಸರ್ಕಾರ ಗುರಿಯಾಗಿತ್ತು. ಇದೀಗ ಆದರೆ ಪ್ರತಿಬಾರಿ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ತಪ್ಪಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

33 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

41 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

48 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago