Featured

ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ –  ಹಿಂದಿನ ಕಾರು ಚಾಲಕ ಪೊಲೀಸ್ ವಶಕ್ಕೆ..! Vishwanews24

ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ –  ಹಿಂದಿನ ಕಾರು ಚಾಲಕ ಪೊಲೀಸ್ ವಶಕ್ಕೆ..!

ಬೆಂಗಳೂರು : ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರತಿಮಾ ಬಳಿ ಡ್ರೈವರ್ ಆಗಿದ್ದ ಕಿರಣ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಕೊಲೆ ಮಾಡಿರುವುದನ್ನು ಕಿರಣ್ ಒಪ್ಪಿಕೊಂಡಿದ್ದಾಗಿ ತಿಳಿಸಿದ್ದಾರೆ.

ಪ್ರತಿಮಾರ ಸರ್ಕಾರಿ ಕಾರಿನ ಚಾಲಕನಾಗಿದ್ದ ಕಿರಣ್ ಎಂಬಾತನೇ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತರಾದ ದಯಾನಂದ್ ಅವರು, “ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ . ಆತನನ್ನು ಮಲೆಮಹದೇಶ್ವರ ದೇವಸ್ಥಾನದಲ್ಲಿ ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ. ಕಿರಣ್, ಕೆಲವು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದ.

ಇತ್ತೀಚೆಗೆ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಅದೇ ಕಾರಣಕ್ಕೆ ಕಿರಣ್ ನನ್ನು ಇತ್ತೀಚೆಗೆ ಪ್ರತಿಮಾ ಕೆಲಸದಿಂದ ತೆಗೆದುಹಾಕಿದ್ದರು ಎನ್ನಲಾಗಿದೆ. ಅದೇ ಸೇಡಿಗೆ ಕಿರಣ್, ಪ್ರತಿಮಾ ಅವರನ್ನು ಕೊಲೆ ಮಾಡಿದ್ದಾನೆ” ಎಂದು ಆಯುಕ್ತರು ತಿಳಿಸಿದ್ದಾರೆ. ಇಲಾಖೆಯಿಂದ ಪ್ರತಿಮಾ ಅವರ ಉಪಯೋಗಕ್ಕಾಗಿ ಬೊಲೆರೊ ವಾಹನವನ್ನು ನೀಡಲಾಗಿತ್ತು. ಆ ಹೊಸ ಕಾರನ್ನು ಚಾಲಕ ಕಿರಣ್ ಅಪಘಾತಕ್ಕೀಡು ಮಾಡಿದ್ದ. ಅದರಿಂದ, ಸಿಟ್ಟಿಗೆದ್ದಿದ್ದ ಪ್ರತಿಮಾ ಅವರು ಕಿರಣ್ ನನ್ನು ವಾರದ ಹಿಂದೆ ಕೆಲಸದಿಂದ ವಜಾಗೊಳಿಸಿದ್ದರೆಂದು ಹೇಳಲಾಗಿದೆ. ಪ್ರತಿಮಾ ಅವರು ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿಸಿ ಕೊಲೆ ಮಾಡಿರುವುದು ಸ್ಪಷ್ಟವಾಗಿತ್ತು. ಅದರಿಂದ ಯಾರೋ ಪ್ರತಿಮಾ ಅವರಿಗೆ ಪರಿಚಯದವರೇ ಕೊಲೆ ಮಾಡಿರಬಹುದೆಂದು ಗುಮಾನಿಯಿತ್ತು. ಅದೇ ವೇಳೆ, ಪ್ರತಿಮಾ ಅವರ ಮನೆಗೆ ಬಂದು ಹೋಗುತ್ತಿದ್ದವರ ವಿವರಗಳನ್ನು ಕಲೆ ಹಾಕಿದ್ದಾಗ, ಕಿರಣ್ ವಾರದ ಹಿಂದೆ ಕೆಲಸ ಬಿಟ್ಟಿದ್ದ ಅಂಶ ಪತ್ತೆಯಾಗಿತ್ತು. ಆದರೆ, ಕಿರಣ್ ನನ್ನು ಹುಡುಕಾಡಿದಾಗ ಆತ ನಾಪತ್ತೆಯಾಗಿದ್ದ. ಕಡೆಗೆ ಆತನ ಮೊಬೈಲ್ ಅನ್ನು ಟ್ರೇಸ್ ಮಾಡುವ ಮೂಲಕ ಆತನ ಲೊಕೇಶನ್ ಪತ್ತೆ ಮಾಡಿದ ಸುಬ್ರಹ್ಮಣ್ಯ ನಗರ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಕೆಲಸದಿಂದ ತೆಗೆದ ಕೂಡಲೇ ಪ್ರತಿಮಾರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾಗಿ ಕಿರಣ್, ಪೊಲೀಸರ ವಿಚಾರಣೆ ವೇಳೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಶನಿವಾರ ರಾತ್ರಿ, ಪ್ರತಿಮಾ ಅವರು ತಮಗೆ ನೀಡಿದ್ದ ಸರ್ಕಾರಿ ಕಾರಿನಲ್ಲೇ ಬಂದು ಮನೆಗೆ ತಲುಪಿದ್ದರು. ಅಂದು ರಾತ್ರಿ ಸುಮಾರು 8.30ರ ಸುಮಾರಿಗೆ ಅವರ ಸಹೋದರ ಫೋನ್ ಮಾಡಿದ್ದರು. ಅವರು ಕರೆ ಸ್ವೀಕರಿಸಿರಲಿಲ್ಲ. ಪುನಃ ಭಾನುವಾರ ಬೆಳಗ್ಗೆ ಕರೆ ಮಾಡಿದಾಗ ಆಗಲೂ ಕರೆ ಸ್ವೀಕರಿಸಿದೇ ಇದ್ದಿದ್ದರಿಂದ ಅವರು ಪ್ರತಿಮಾ ಅವರು ಬಾಡಿಗೆಯಿದ್ದ ಕೆಳಗಿನ ಮನೆಯವರಿಗೆ ಫೋನಾಯಿಸಿ, ಮೇಲೆ ಹೋಗಿ ಪ್ರತಿಮಾರನ್ನು ಮಾತನಾಡಿಸುವಂತೆ ಕೇಳಿಕೊಂಡಿದ್ದರು. ಹಾಗೆಯೇ, ಪ್ರತಿಮಾ ಅವರ ಕೆಳಗಿನ ಮನೆಯವರು ಪ್ರತಿಮಾ ಅವರ ಮನೆಯಲ್ಲಿ ಹೋಗಿ ನೋಡಿದಾಗ ಅವರ ಬೆಡ್ ರೂಮಿನಲ್ಲಿ ಪ್ರತಿಮಾ ಅವರ ಶವ ಬಿದ್ದಿದ್ದು ಕಂಡು ಬಂದು ಗಾಬರಿಯಾಗಿ, ಪ್ರತಿಮಾ ಸಹೋದರಿಗೆ ಸುದ್ದಿ ಮುಟ್ಟಿಸಿದ್ದರು. ಆಗ ಬೇಗನೇ ಧಾವಿಸಿ ಬಂದ ಪ್ರತಿಮಾ ಅವರ ಸಹೋದರು ಪೊಲೀಸರಿಗೆ ಸುದ್ದಿ ತಿಳಿಸಿದ್ದರು. ಆಗ, ಪ್ರಕರಣ ಹೊರಬಿದ್ದಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago