ಬೆಂಗಳೂರು: ‘ಗಣೇಶನ ವಿಗ್ರಹ ಅಥವಾ ಬೇರಾವುದೇ ವಿಧದ ವಿಗ್ರಹಗಳನ್ನು ಕೆರೆಗಳಲ್ಲಿ ವಿಸರ್ಜಿಸಬಾರದು. ಅದಕ್ಕಾಗಿ ಕೃತಕ ಕೆರೆಗಳನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಟ್ಟೆಚ್ಚರ ವಹಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
‘ಬಿಬಿಎಂಪಿ ವ್ಯಾಪ್ಯಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು’ ಎಂದು ಕೋರಿ ‘ಸಿಟಿಜನ್ಸ್ ಆ್ಯಕ್ಷನ್ ಗ್ರೂಪ್’ ಕಾರ್ಯದರ್ಶಿ ನೊಮಿತಾ ಚಾಂಡಿ, ‘ಜೆ.ಪಿ ನಗರ 4ನೇ ಹಂತದ ಡಾಲರ್ಸ್ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ’ದ ಕಾರ್ಯದರ್ಶಿ ಗುಂಡಾ ಭಟ್ ಮತ್ತು ‘ಸಮರ್ಪಣಾ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮೇಲಿನ ಮಧ್ಯಂತರ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ಮುಂದುವರಿಸಿತು.
‘ಮೂರ್ತಿಗಳ ವಿಸರ್ಜನೆ ಕುರಿತು ಕೇಂದ್ರ ಪರಿಸರ ಮಾಲಿನ್ಯ ಮಂಡಳಿ ಹೊರಡಿಸಿರುವ ಮಾರ್ಗಸೂಚಿ ಅನ್ವಯ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಪಿಎಸ್‌ಸಿ) ಹೊರಡಿಸಿರುವ ಆದೇಶ ಜಾರಿಗೊಳ್ಳಬೇಕು. ಈ ಬಗೆಗಿನ ಮಾರ್ಗಸೂಚಿಗಳನ್ನು ವ್ಯಾಪಕ ಪ್ರಚಾರದ ಮೂಲಕ ಸಾರ್ವಜನಿಕರಿಗೆ ತಿಳಿಸಬೇಕು. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಿಮಿನಲ್ ಕ್ರಮ ಜರುಗಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿತು.
ಗಣೇಶ ಚತುರ್ಥಿ ಬಂತೆಂದರೆ ಮುಂಬೈ, ಬೆಂಗಳೂರು, ಮಂಗಳೂರು, ಹೈದರಾಬಾದ್ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಪರಿಸರ ಪ್ರೇಮಿ ಗಣೇಶ ಕೂರಿಸಿ ಎಂಬ ಕೂಗು ಕೇಳಿಬರುತ್ತದೆ. ಇದೀಗ ಪರಿಸರ ಮಾಲಿನ್ಯ ತಪ್ಪಿಸುವ ನಿಟ್ಟಿನಲ್ಲಿ, ಮೂರ್ತಿ ವಿಸರ್ಜನೆಗೆ ಕೃತಕ ಕೆರೆಗಳನ್ನು ನಿರ್ಮಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…