ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದಂತೆ ವಿಜೃಂಭಣೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು : ಜಿಲ್ಲಾಡಳಿತಕ್ಕೆ ಶಾಸಕ ವೇದವ್ಯಾಸ ಕಾಮತ್ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಸ್ಪಂದಿಸಬೇಕು ಎಂದು ಮೆಸ್ಕಾಂ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ  ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಗಣೇಶೋತ್ಸವ ಆಚರಣೆಯ ಎಲ್ಲಾ ದಿನಗಳಲ್ಲಿ ನಾಗರಿಕರಿಗೆ, ಸಮಿತಿಗಳಿಗೆ ತೊಂದರೆ ಆಗದಂತೆ ಉತ್ಸವಗಳು ವಿಜೃಂಭಣೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 2 ರಿಂದ 6ರವರೆಗೆ ಮಂಗಳೂರು ಮಹಾನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವದ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆ ಗಣೇಶೋತ್ಸವ ಆಚರಿಸುವ ಸಮಿತಿಯವರು ತಮಗೆ ಬೇಕಾದ ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂಗೆ ಅರ್ಜಿ ಸಲ್ಲಿಸಿದಾಗ ಯಾವುದೇ ವಿಳಂಬ ಮಾಡದೇ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು  ಹೇಳಿದ್ದಾರೆ.

ಮೈಕ್, ಸೌಂಡ್ ಸಿಸ್ಟಮ್ ಸಹಿತ ಇತರ ವ್ಯವಸ್ಥೆಗಳಿಗೆ ಗಣೇಶೋತ್ಸವ ಸಮಿತಿಗಳು ಮನವಿ ಮಾಡಿದ ತಕ್ಷಣ ಅನುಮತಿ ನೀಡಬೇಕು. ಶೋಭಾಯಾತ್ರೆಗಳು ಸಾಗುವ ದಾರಿಯಲ್ಲಿ ಹೊಂಡ, ಗುಂಡಿಗಳು ಇದ್ದಲ್ಲಿ ಅದನ್ನು ತಕ್ಷಣ ಮುಚ್ಚಲು ಕೂಡ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಪೊಲೀಸ್ ಕಮೀಷನರ್ ಕಚೇರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.