ಮಂಗಳೂರು: ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಸ್ಪಂದಿಸಬೇಕು ಎಂದು ಮೆಸ್ಕಾಂ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಯ ಎಲ್ಲಾ ದಿನಗಳಲ್ಲಿ ನಾಗರಿಕರಿಗೆ, ಸಮಿತಿಗಳಿಗೆ ತೊಂದರೆ ಆಗದಂತೆ ಉತ್ಸವಗಳು ವಿಜೃಂಭಣೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 2 ರಿಂದ 6ರವರೆಗೆ ಮಂಗಳೂರು ಮಹಾನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವದ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆ ಗಣೇಶೋತ್ಸವ ಆಚರಿಸುವ ಸಮಿತಿಯವರು ತಮಗೆ ಬೇಕಾದ ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂಗೆ ಅರ್ಜಿ ಸಲ್ಲಿಸಿದಾಗ ಯಾವುದೇ ವಿಳಂಬ ಮಾಡದೇ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಹೇಳಿದ್ದಾರೆ.
ಮೈಕ್, ಸೌಂಡ್ ಸಿಸ್ಟಮ್ ಸಹಿತ ಇತರ ವ್ಯವಸ್ಥೆಗಳಿಗೆ ಗಣೇಶೋತ್ಸವ ಸಮಿತಿಗಳು ಮನವಿ ಮಾಡಿದ ತಕ್ಷಣ ಅನುಮತಿ ನೀಡಬೇಕು. ಶೋಭಾಯಾತ್ರೆಗಳು ಸಾಗುವ ದಾರಿಯಲ್ಲಿ ಹೊಂಡ, ಗುಂಡಿಗಳು ಇದ್ದಲ್ಲಿ ಅದನ್ನು ತಕ್ಷಣ ಮುಚ್ಚಲು ಕೂಡ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಪೊಲೀಸ್ ಕಮೀಷನರ್ ಕಚೇರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…