ಉಡುಪಿ: ಶಾಂತಿಯುತ ಗಣೇಶೋತ್ಸವ ಆಚರಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 ಮತ್ತು 18ರಂದು ವಿವಿಧ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಸೆ.14ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಸೆ.16ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸೆ.18ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲಿಯೂ ಈ ನಿಷೇಧ ಜಾರಿಯಲ್ಲಿರಲಿದೆ.
ಉಡುಪಿ : ಸೆ. 16 ರಂದು ನೇರ ಸಂದರ್ಶನ ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್…
ಉಡುಪಿ : ಯುವತಿ ನಾಪತ್ತೆ ಉಡುಪಿ : ಕಿನ್ನಿಮುಲ್ಕಿ ವೇಗಸ್ ಟೌನ್‌ಶಿಪ್‌ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು…
ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ಉಡುಪಿ : ಮಣ್ಣಿನಿಂದ…
ಗೌರಿ - ಗಣೇಶ ಹಬ್ಬದ ಹಿನ್ನೆಲೆ : ಸೆ.14ರಂದು ಮುಳ್ಳಯ್ಯನಗಿರಿ ಸೇರಿ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಚಿಕ್ಕಮಗಳೂರು: ಗೌರಿ-ಗಣೇಶ…
ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ ಕಾರ್ಕಳ: ಕರಾವಳಿ…
ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ.. ಜಿಲ್ಲೆಯಿಂದ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ…