Featured

ಗಣೇಶ ಚತುರ್ಥಿ ಹಬ್ಬದ ವಿಶೇಷತೆ -Vishwanews24

ಗಣೇಶ ಚತುರ್ಥಿ ಹಬ್ಬದ ವಿಶೇಷತೆ ಹಾಗೂ ಹಿನ್ನೆಲೆ -Vishwanews24

ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ವಿದ್ಯೆಯ ಮತ್ತು ಜ್ಞಾನದ ಅಧಿಪತಿ, ಸಂಪತ್ತು ಮತ್ತು ಅದೃಷ್ಟದ ಅಧಿನಾಯಕನಾದ ನಮ್ಮ ಮೂಷಿಕ ವಾಹನನ ಜನನವನ್ನು ಸಾರುವ ಹಬ್ಬ. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಚತುರ್ಥಿ ಇಲ್ಲವೇ ಚೌತಿ ಎಂದು ಸಹ ಕರೆಯುತ್ತಾರೆ. ಇದನ್ನು ಹಿಂದೂಗಳೆಲ್ಲರು ಶ್ರದ್ಧಾ ಭಕ್ತಿಗಳಿಂದ ಆಚರಿಸುತ್ತಾರೆ.

ಇತಿಹಾಸ

ಗಣೇಶ ಚತುರ್ಥಿಯ ಆರಂಭವು ಮರಾಠರು ತಮ್ಮ ಆಳ್ವಿಕೆಯ ಉತ್ತುಂಗದಲ್ಲಿದ್ದಾಗ ಪ್ರಚಾರಕ್ಕೆ ತಂದರು. ಅದರಲ್ಲಿಯೂ ಮರಾಠರ ಶ್ರೇಷ್ಠ ರಾಜ ಛತ್ರಪತಿ ಶಿವಾಜಿಯು ಇದನ್ನು ಆಚರಿಸಲು ಆರಂಭಿಸಿದನೆಂದು ಇತಿಹಾಸ ಸಾರುತ್ತದೆ. ಗಣೇಶನ ಹಬ್ಬ ಆರಂಭಗೊಳ್ಳಲು ಹಲವಾರು ದಂತ ಕತೆಗಳ ಹಿನ್ನಲೆಯಿದೆ. ಶಿವ-ಪಾರ್ವತಿಯರ ಮಗನಾದ ಗಣೇಶನ ಹುಟ್ಟಿನ ಕುರಿತು ಹಲವಾರು ಕತೆಗಳು ಚಾಲ್ತಿಯಲ್ಲಿವೆ. ಅದರಲ್ಲಿ ಅತ್ಯಂತ ಪ್ರಸಿದ್ಧವಾದ ಕತೆ ಹೀಗಿದೆ.

ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ.

ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.

ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿನಾಯಕನಾಗಿರುವನು.

ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ.

ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂಲೋಕಕ್ಕೆ ಬಂದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಅಂದು ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

ಆಚರಣೆ

ಗಣೇಶ ಚತುರ್ಥಿಯ ಸಿದ್ಧತೆಗಳು ಒಂದು ತಿಂಗಳ ಮೊದಲಿನಿಂದಲೆ ಆರಂಭಗೊಳ್ಳುತ್ತವೆ. ಈ ಹಬ್ಬವು ಸುಮಾರು ಹತ್ತು ದಿನಗಳ ಕಾಲ ನಡೆಯುತ್ತದೆ ( ಭಾದ್ರಪದ ಶುದ್ಧ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ). ಮೊದಲನೆ ದಿನ ಮನೆಗಳಲ್ಲಿ ಗಣೇಶನ ಮಣ್ಣಿನ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗುತ್ತದೆ. ಮನೆಗಳನ್ನು ಹೂವಿನಿಂದ ಅಲಂಕರಿಸಲಾಗುತ್ತದೆ. ದೇವಸ್ಥಾನಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ಭಕ್ತಾಧಿಗಳು ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಗಳು, ಭಜನೆಗಳು ನಿರಂತರವಾಗಿ ನಡೆಯುತ್ತವೆ.

ಜೊತೆಗೆ ಹಬ್ಬದ ಸಂದರ್ಭದಲ್ಲಿ ಮನೆ ಮಂದಿಯೆಲ್ಲ ಒಂದಾಗಿ ಸೇರುತ್ತಾರೆ. ಸ್ಥಳೀಯ ಸಂಘ ಸಂಸ್ಥೆಗಳು ಪೆಂಡಾಲ್‌ಗಳನ್ನು ಹಾಕಿ ಬೃಹತ್ ಗಣಪತಿಯ ವಿಗ್ರಹಗಳನ್ನು ಇರಿಸುತ್ತಾರೆ. ಈ ಪೆಂಡಾಲ್‌ಗಳಲ್ಲಿ ಗಣಪತಿಯ ಉತ್ಸವವದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ.

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.

ಹಬ್ಬದ ಅಡುಗೆಗಳು

ಈ ಹಬ್ಬದ ಸಂದರ್ಭದಲ್ಲಿ ಹಲವಾರು ಅಡುಗೆಗಳನ್ನು ಮತ್ತು ಖಾದ್ಯಗಳನ್ನು ಮಾಡಲಾಗುತ್ತದೆ. ಆದರೂ ಗಣಪತಿಯ ಪ್ರಿಯ ಪದಾರ್ಥವಾದ ಮೋದಕಕ್ಕೆ ಈ ಹಬ್ಬದಲ್ಲಿ ಹೆಚ್ಚಿನ ಪ್ರಾಧಾನ್ಯತೆ ಇರುತ್ತದೆ. ಇದು ಗಣಪತಿಯ ನೆಚ್ಚಿನ ತಿಂಡಿ. ಆದ್ದರಿಂದ ಇದನ್ನು ತಪ್ಪದೆ ಮಾಡಲಾಗುತ್ತದೆ. ಜೊತೆಗೆ ಖರ್ಜಿ ಕಾಯಿ, ಲಾಡು, ಬರ್ಫಿ ಮತ್ತು ಪೇಡಾಗಳನ್ನು ಸಹ ಮಾಡಲಾಗುತ್ತದೆ.

 

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago