Featured

ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ : ಕೆ.ಎಸ್.ಈಶ್ವರಪ್ಪ -Vishwanews24

ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು,

ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ..

ಗಣೇಶೋತ್ಸವ ನಿಲ್ಲಿಸಬೇಕು ಎಂಬುದನ್ನು ನಾನು ಒಪ್ಪಲ್ಲ…

ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ..

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ‌. ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು ಎನ್ನುವ ವಿಚಾರದಲ್ಲಿ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದುತ್ವದ ಸಿದ್ದಾಂತವನ್ನು ಯಾವತ್ತೂ ಒಪ್ಪುವವರೂ ಕೂಡ‌. ಗಣಪತಿ ಉತ್ಸವವನ್ನು ನಡೆಸಿಯೇ ನಡೆಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಆದರೆ ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂದು ಗಮನಿಸಬೇಕು. ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ- ನಿಯಮಗಳನ್ನು ತಿಳಿಸಲಿದೆ. ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತದೆ. ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ. ರಾಜ್ಯದ ಜನ ಕೂಡ ಅದನ್ನು ಗಮನಿಸುತ್ತಾರೆ ಎಂದರು.

ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳಲು ಇಷ್ಟ ಪಡುತ್ತೇನೆ. ನಾನು ಒಪ್ಪಲ್ಲ, ಹಾಗೇಯೇ ಗಣೇಶೋತ್ಸವ ನಿಲ್ಲಿಸಬೇಕು ಎಂಬುದನ್ನು ನಾನು ಒಪ್ಪಲ್ಲ. ಆರೋಗ್ಯವೂ ಮುಖ್ಯ. ಅದರ ಕಡೆಗೂ ಗಮನ ಕೊಡಬೇಕು ಎಂದು ಸಚಿವ ಈಶ್ವರಪ್ಪ ಹೇಳಿದರು

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

3 days ago