ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು ಎನ್ನುವ ವಿಚಾರದಲ್ಲಿ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದುತ್ವದ ಸಿದ್ದಾಂತವನ್ನು ಯಾವತ್ತೂ ಒಪ್ಪುವವರೂ ಕೂಡ. ಗಣಪತಿ ಉತ್ಸವವನ್ನು ನಡೆಸಿಯೇ ನಡೆಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಆದರೆ ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂದು ಗಮನಿಸಬೇಕು. ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ- ನಿಯಮಗಳನ್ನು ತಿಳಿಸಲಿದೆ. ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತದೆ. ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ. ರಾಜ್ಯದ ಜನ ಕೂಡ ಅದನ್ನು ಗಮನಿಸುತ್ತಾರೆ ಎಂದರು.
ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳಲು ಇಷ್ಟ ಪಡುತ್ತೇನೆ. ನಾನು ಒಪ್ಪಲ್ಲ, ಹಾಗೇಯೇ ಗಣೇಶೋತ್ಸವ ನಿಲ್ಲಿಸಬೇಕು ಎಂಬುದನ್ನು ನಾನು ಒಪ್ಪಲ್ಲ. ಆರೋಗ್ಯವೂ ಮುಖ್ಯ. ಅದರ ಕಡೆಗೂ ಗಮನ ಕೊಡಬೇಕು ಎಂದು ಸಚಿವ ಈಶ್ವರಪ್ಪ ಹೇಳಿದರು
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…