ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಈಗ ರೋಚಕ ತಿರುವು ಸಿಕ್ಕಿದೆ. ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದ ನಾಲ್ವರ ಭೀಕರ ಹತ್ಯೆಗೆ ಸ್ವಂತ ಮಗನೇ ಸುಪಾರಿ ನೀಡಿದ್ದ ಎಂಬ ಅಂಶ ಬಯಲಾಗಿದೆ.
ಗದಗ ನಗರದ ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಕಿರಿಯ ಮಗ ಕಾರ್ತಿಕ್ ಬಾಕಳೆ (28), ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ ಹಾದಿಮನಿ (45), ಪುತ್ರಿ ಆಕಾಂಕ್ಷಾ ಹಾದಿಮನಿ (16) ಕೊಲೆಯಾಗಿತ್ತು. ಇದೀಗ ಪ್ರಕಾಶ್ ಬಾಕಳೆ ಅವರ ಹಿರಿಯ ಮಗ ವಿನಾಯಕ್ ಬಾಕಳೆ ಕೊಲೆಗೆ ಸುಪಾರಿ ನೀಡಿದ್ದು ಬಹಿರಂಗವಾಗಿದೆ.
ಕುಟುಂಬ ಮುಗಿಸಲು ಪ್ರಕಾಶ್ ಬಾಕಳೆ ಅವರ ಹಿರಿಯ ಮಗ ವಿನಾಯಕ್ ಬಾಕಳೆ ಮಹರಾಷ್ಟ್ರ ಮೂಲದ ಫಯಾಜ್ ಆ್ಯಂಡ್ ಗ್ಯಾಂಗ್ ಗೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದಾನೆ. ಕೊಲೆ ಹಿಂದೆ ಆಸ್ತಿ ಹಂಚಿಕೆ ವಿಷಯ ಇರುವ ಬಗ್ಗೆ ಅನುಮಾನ ಮೂಡಿದೆ. ಆರೋಪಿಯನ್ನ ವಶಕ್ಕೆ ಪಡೆದು ಗದಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಶುಕ್ರವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಕೊಲೆ ನಡೆದಿತ್ತು. ಮನೆಗೆ ನುಗ್ಗಿ ಈ ಹತ್ಯೆ ನಡೆದಿತ್ತು. ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್ ಬಾಕಳೆ, ಹಾಲಿ ಉಪಾಧ್ಯಕ್ಷೆ ಸುನಂದಾ ಬಾಕಳೆ ಟಾರ್ಗೆಟ್ ಮಾಡಿ ಈ ಭೀಕರ ಕೃತ್ಯ ನಡೆದಿತ್ತು.
ರಾತ್ರಿ ಮನೆಗೆ ನುಗ್ಗಿ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದ ಪರಶುರಾಮ್ ಕುಟುಂಬದ ಹತ್ಯೆಗೈಯಲಾಗಿದ್ದು, ನಂತರ ನೆಲಮಹಡಿಯಲ್ಲಿ ಮಲಗಿದ್ದ ಕಾರ್ತಿಕ್ ಹತ್ಯೆ ಮಾಡಲಾಗಿತ್ತು. ಕಾರ್ತಿಕ್ ಮದುವೆ ನಿಶ್ಚಯ ಕಾರ್ಯಕ್ರಮಕ್ಕೆ ಬಂದಿದ್ದ ಸಂಬಂಧಿಕರ ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿ ಮೂರು ಚಾಕುಗಳನ್ನ ದುಷ್ಕರ್ಮಿಗಳು ಹಿತ್ತಲಲ್ಲಿ ಎಸೆದುಹೋಗಿದ್ದರು. ಮೃತರಾದ ಪರಶುರಾಮ, ಲಕ್ಷ್ಮೀ ಹಾದಿಮನಿ, ಪುತ್ರಿ ಆಕಾಂಕ್ಷಾ ಈ ಮೂವರು ಕೊಪ್ಪಳ ಮೂಲದವರಾಗಿದ್ದಾರೆ. ಇವರೆಲ್ಲ ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಕಾರ್ಯಕ್ರಮಕ್ಕಾಗಿ ಬಂದಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…