Featured

ಗದಗ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು – ಹಿರಿಮಗನಿಂದಲೇ ಕೊಲೆಗೆ ಸುಪಾರಿ ..!- Vishwanews24

ಗದಗ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು – ಹಿರಿಮಗನಿಂದಲೇ ಕೊಲೆಗೆ ಸುಪಾರಿ

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಈಗ ರೋಚಕ ತಿರುವು ಸಿಕ್ಕಿದೆ. ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದ ನಾಲ್ವರ ಭೀಕರ ಹತ್ಯೆಗೆ ಸ್ವಂತ ಮಗನೇ ಸುಪಾರಿ ನೀಡಿದ್ದ ಎಂಬ ಅಂಶ ಬಯಲಾಗಿದೆ.

ಗದಗ ನಗರದ ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಕಿರಿಯ ಮಗ ಕಾರ್ತಿಕ್ ಬಾಕಳೆ (28), ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ ಹಾದಿಮನಿ (45), ಪುತ್ರಿ ಆಕಾಂಕ್ಷಾ ಹಾದಿಮನಿ (16) ಕೊಲೆಯಾಗಿತ್ತು. ಇದೀಗ ಪ್ರಕಾಶ್ ಬಾಕಳೆ ಅವರ ಹಿರಿಯ ಮಗ ವಿನಾಯಕ್ ಬಾಕಳೆ ಕೊಲೆಗೆ ಸುಪಾರಿ ನೀಡಿದ್ದು ಬಹಿರಂಗವಾಗಿದೆ.

ಕುಟುಂಬ ಮುಗಿಸಲು ಪ್ರಕಾಶ್ ಬಾಕಳೆ ಅವರ ಹಿರಿಯ ಮಗ ವಿನಾಯಕ್ ಬಾಕಳೆ ಮಹರಾಷ್ಟ್ರ ಮೂಲದ ಫಯಾಜ್ ಆ್ಯಂಡ್ ಗ್ಯಾಂಗ್ ಗೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದಾನೆ. ಕೊಲೆ ಹಿಂದೆ ಆಸ್ತಿ ಹಂಚಿಕೆ ವಿಷಯ ಇರುವ ಬಗ್ಗೆ ಅನುಮಾನ ಮೂಡಿದೆ. ಆರೋಪಿಯನ್ನ ವಶಕ್ಕೆ ಪಡೆದು ಗದಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶುಕ್ರವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಕೊಲೆ ನಡೆದಿತ್ತು. ಮನೆಗೆ ನುಗ್ಗಿ ಈ ಹತ್ಯೆ ನಡೆದಿತ್ತು. ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್ ಬಾಕಳೆ, ಹಾಲಿ ಉಪಾಧ್ಯಕ್ಷೆ ಸುನಂದಾ ಬಾಕಳೆ ಟಾರ್ಗೆಟ್ ಮಾಡಿ ಈ ಭೀಕರ ಕೃತ್ಯ ನಡೆದಿತ್ತು.

ರಾತ್ರಿ ಮನೆಗೆ ನುಗ್ಗಿ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದ ಪರಶುರಾಮ್ ಕುಟುಂಬದ ಹತ್ಯೆಗೈಯಲಾಗಿದ್ದು, ನಂತರ ನೆಲಮಹಡಿಯಲ್ಲಿ ಮಲಗಿದ್ದ ಕಾರ್ತಿಕ್ ಹತ್ಯೆ ಮಾಡಲಾಗಿತ್ತು. ಕಾರ್ತಿಕ್ ಮದುವೆ ನಿಶ್ಚಯ ಕಾರ್ಯಕ್ರಮಕ್ಕೆ ಬಂದಿದ್ದ ಸಂಬಂಧಿಕರ ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿ ಮೂರು ಚಾಕುಗಳನ್ನ ದುಷ್ಕರ್ಮಿಗಳು ಹಿತ್ತಲಲ್ಲಿ ಎಸೆದುಹೋಗಿದ್ದರು. ಮೃತರಾದ ಪರಶುರಾಮ, ಲಕ್ಷ್ಮೀ ಹಾದಿಮನಿ, ಪುತ್ರಿ ಆಕಾಂಕ್ಷಾ ಈ ಮೂವರು ಕೊಪ್ಪಳ ಮೂಲದವರಾಗಿದ್ದಾರೆ. ಇವರೆಲ್ಲ ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಕಾರ್ಯಕ್ರಮಕ್ಕಾಗಿ ಬಂದಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

19 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago