Featured

ಗದಗ:  ಧಾರಾಕಾರ ಮಳೆ – ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – vishwanews24

ಗದಗ:  ಧಾರಾಕಾರ ಮಳೆ – ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – ಓರ್ವನ ಶವ ಪತ್ತೆ ; ಇನ್ನೋರ್ವನಿಗಾಗಿ ಮುಂದುವರಿದ ಶೋಧ ಕಾರ್ಯ

ಗದಗ: ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳದ ನೀರಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ  ತಾಲೂಕಿನ ಹುಣಸಿಕಟ್ಟಿಬಳಿ ನಡೆದಿದೆ.

ಓರ್ವ ಯುವಕನ ಶವ ಪತ್ತೆಯಾಗಿದ್ದು, 25 ವರ್ಷದ ಶಿವಪ್ಪ ಅಶೋಕಪ್ಪ ಅವರಾದಿ ಎಂದು ಗುರುತಿಸಲಾಗಿದೆ. ಹಾಗೂ 26 ವರ್ಷದ ಮಣಿಕಂಠ ಅಶೋಕ ಮಲ್ಲಾಪೂರ ಎಂಬುವವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಜಿಲ್ಲೆಯಲ್ಲಿ ಭಾನುವಾರ ಸಾಯಂಕಾಲದಿಂದ ಧಾರಾಕಾರ ಮಳೆ ಸುರಿದಿದೆ. ಮಣಿಕಂಠನ ಹೆಂಡತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಸುರಿದ ಮಳೆಯಿಂದಾಗಿ ಹೆಂಡತಿಗೆ ಊರಿಗೆ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಪತ್ನಿಯನ್ನು ಕರೆತರಲು ತನ್ನ ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹೋಗಿದ್ದ. ಹುಣಸಿಕಟ್ಟಿಯಿಂದ ನರಗುಂದಕ್ಕೆ ಬೈಕಿನಲ್ಲಿ ಹೊರಟಿದ್ದರು.

ಮಾರ್ಗ ಮಧ್ಯೆ ಒಡ್ಡಿನ ಹಳ್ಳವೊಂದು ತುಂಬಿ ಹರಿಯುತ್ತಿತ್ತು. ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಮುಂದಾಗಿದ್ದ ವೇಳೆ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸದ್ಯ ಸ್ಥಳಕ್ಕೆ ನರಗುಂದ ಪೋಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 minutes ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

36 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

2 hours ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago