Featured

ಗದಗ : ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ – Vishwanews24

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಗದಗ: ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಅವರ ಮನೆಗೆ ಬಂದಿದ್ದ ಸಂಬಂಧಿಕರು ಸೇರಿದಂತೆ ನಿದ್ರಿಸುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಗುರುವಾರ (ಏ.18) ರಂದು ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದಾರೆ. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.

ತಡರಾತ್ರಿ ಪರಶುರಾಮ ಕುಟುಂಬ ಮಲಗಿದ್ದ ಕೋಣೆ ಗಾಜಿನ ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿಟಿಕಿ ಒಡೆದ ಮತ್ತು ಕಿರಿಚಾಟದ ಸದ್ದು ಕೇಳಿ ಏನಾಯಿತೆಂದು ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್​ ಬಾಕಳೆ ನೋಡಲು ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್​ನನ್ನೂ ಕೊಲೆ ಮಾಡಿದ್ದಾರೆ.

ಬಳಿಕ ದುಷ್ಕರ್ಮಿಗಳು ಮನೆಯ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಿಲು ತಟ್ಟಿದ್ದಾರೆ. ಆದರೆ ದಂಪತಿ ಬಾಗಿಲು ತೆಗೆಯದೆ ತಕ್ಷಣ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ.

ಕೊಲೆ ನಡೆದ ಪ್ರಕಾಶ್​ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್​​ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದರು. ಈ ವೇಳೆ ಕುಟುಂಬಸ್ಥರು ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago