ತೆಲಂಗಾಣ : ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಂಧಿಸಲಾಗಿದೆ. ಇದರ ಜತೆಗೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಹೆಡ್ ಕಾನ್‌ಸ್ಟೆಬಲ್ ದೂರ ಆಧಾರ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಿರಿಯ ಅಧಿಕಾರಿಗಳು ನಡೆಸಲಾಗಿದ್ದು, ಮಹಿಳಾ ಹೆಡ್ ಕಾನ್‌ಸ್ಟೆಬಲ್ ಆರೋಪ ದೃಢಪಟ್ಟಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬು ಸಬ್ ಇನ್ಸ್‌ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆ ನೀಡಿದ ದೂರಿನಲ್ಲಿ ಜೂನ್ 16 ರಂದು ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೊಠಡಿಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ. ಎಸ್‌ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್‌ಸ್ಟೆಬಲ್ ಆರೋಪಿಸಿದರು.
ಸಬ್ ಇನ್ಸ್ ಪೆಕ್ಟರ್ ಭವಾನಿ ಸೇನ್ ವಿರುದ್ಧದ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಮಹಾನಿರೀಕ್ಷಕ (ಮಲ್ಟಿ ಝೋನ್ -1) ಎ.ವಿ.ರಂಗನಾಥ್, ಭವಾನಿ ಸೇನ್ ಅವರನ್ನು ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾನ್‌ಸ್ಟೆಬಲ್ ದೂರಿನ ಆಧಾರದ ಮೇಲೆ ಎಸ್‌ಐ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸಬ್ ಇನ್ಸ್ ಪೆಕ್ಟರ್ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಈ ಹಿಂದೆ ಮೂವರು ಮಹಿಳಾ ಪೇದೆಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆರೋಪವೂ ಕೇಳಿ ಬಂದಿದೆ. ಈ ಹಿಂದೆ ಎಸ್‌ಐ ವಿರುದ್ಧ ಜುಲೈ 2022 ರಲ್ಲಿ ಆಸಿಫಾಬಾದ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಎಸ್‌ಐ ಹೀಗೆ ಮಹಿಳಾ ಅಧಿಕಾರಿಗಳಿ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದಲ್ಲಿ ತೊಡಗಿರುವುದು ರಾಜ್ಯ ಪೊಲೀಸರ ಇಲಾಖೆಗೆ ಧಕ್ಕೆ ತರುತ್ತಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…