Featured

ಗನ್​ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ.. ಇಬ್ಬರು ಪೊಲೀಸರು ಅರೆಸ್ಟ್​ – vishwanews24

ಗನ್​ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ.. ಇಬ್ಬರು ಪೊಲೀಸರು ಅರೆಸ್ಟ್​

ತೆಲಂಗಾಣ : ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್​​​ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಂಧಿಸಲಾಗಿದೆ. ಇದರ ಜತೆಗೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಹೆಡ್ ಕಾನ್‌ಸ್ಟೆಬಲ್ ದೂರ ಆಧಾರ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಿರಿಯ ಅಧಿಕಾರಿಗಳು ನಡೆಸಲಾಗಿದ್ದು, ಮಹಿಳಾ ಹೆಡ್ ಕಾನ್‌ಸ್ಟೆಬಲ್ ಆರೋಪ ದೃಢಪಟ್ಟಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬು ಸಬ್ ಇನ್ಸ್‌ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆ ನೀಡಿದ ದೂರಿನಲ್ಲಿ ಜೂನ್ 16 ರಂದು ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೊಠಡಿಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ. ಎಸ್‌ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್‌ಸ್ಟೆಬಲ್ ಆರೋಪಿಸಿದರು.

ಸಬ್ ಇನ್ಸ್ ಪೆಕ್ಟರ್ ಭವಾನಿ ಸೇನ್ ವಿರುದ್ಧದ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಮಹಾನಿರೀಕ್ಷಕ (ಮಲ್ಟಿ ಝೋನ್ -1) ಎ.ವಿ.ರಂಗನಾಥ್, ಭವಾನಿ ಸೇನ್ ಅವರನ್ನು ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾನ್‌ಸ್ಟೆಬಲ್ ದೂರಿನ ಆಧಾರದ ಮೇಲೆ ಎಸ್‌ಐ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸಬ್ ಇನ್ಸ್ ಪೆಕ್ಟರ್ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಈ ಹಿಂದೆ ಮೂವರು ಮಹಿಳಾ ಪೇದೆಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆರೋಪವೂ ಕೇಳಿ ಬಂದಿದೆ. ಈ ಹಿಂದೆ ಎಸ್‌ಐ ವಿರುದ್ಧ ಜುಲೈ 2022 ರಲ್ಲಿ ಆಸಿಫಾಬಾದ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಎಸ್‌ಐ ಹೀಗೆ ಮಹಿಳಾ ಅಧಿಕಾರಿಗಳಿ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದಲ್ಲಿ ತೊಡಗಿರುವುದು ರಾಜ್ಯ ಪೊಲೀಸರ ಇಲಾಖೆಗೆ ಧಕ್ಕೆ ತರುತ್ತಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

60 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago