Featured

ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ, : ಕೇಂದ್ರ ಸರ್ಕಾರವು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಚರಣೆ ಹಿನ್ನೆಲೆ, ರಾಷ್ಟ್ರೀಯ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ.

ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ, ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ, ಒ.ಎಮ್.ಎಸ್.ಎಸ್ ಯೋಜನೆಯಡಿ ಪ್ರತಿ ಸದಸ್ಯರಿಗೆ ಹೆಚ್ಚುವರಿ ೧ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ವಿತರಿಸಲಾಗುವುದು.

ಆದ್ಯತೇತರ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ಕೆ.ಜಿ ಗೆ ೧೫ ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ ೫ ಕೆ.ಜಿ ಅಕ್ಕಿ ಹಾಗೂ ಒಂದಕ್ಕಿ0ತ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ ಅಕ್ಕಿ ವಿತರಿಸಲಾಗುವುದು.

ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದ್ದು, ಬೇರೆ ರಾಜ್ಯದ ಪಡಿತರ ಚೀಟಿದಾರರು ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಕೆ.ಜಿ ಗೆ 3 ರ ರೂ. ಪಾವತಿಸಿ ಪಡಿತರ ಪಡೆಯಬಹುದಾಗಿದೆ.

ಪಡಿತರ ಚೀಟಿದಾರರು ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬoದಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದು. ಪಡಿತರ ವಿತರಣೆ ಕುರಿತು ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: ೧೯೬೭, ತಹಶೀಲ್ದಾರ್ ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಗ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago